ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಅನಾರೋಗ್ಯ ಚಿಂತೆ; ನವವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ

ಮಂಗಳೂರು: ವಾರದ ಹಿಂದಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ಕುದ್ರಡ್ಕ ಎಂಬಲ್ಲಿ ನಡೆದಿದೆ. ಕುದ್ರಡ್ಕದ ಸುಲೈಮಾನ್ ಎಂಬವರ ಪುತ್ರ ನಾಸಿರ್(27) ಮೃತಪಟ್ಟವರು.

ಬೆಂಗಳೂರಿನಲ್ಲಿ ತರಕಾರಿ ವ್ಯಾಪಾರಿಯಾಗಿದ್ದ ನಾಸಿರ್ ವಿವಾಹವಾಗಿ ಏಳು ದಿನಗಳಷ್ಟೇ ಆಗಿತ್ತು. ಅವರು ನರ ದೌರ್ಬಲ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

07/11/2021 03:17 pm

Cinque Terre

10.2 K

Cinque Terre

0

ಸಂಬಂಧಿತ ಸುದ್ದಿ