ಬಜಪೆ: ವಿದ್ಯುತ್ ತಗುಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಅಡ್ಡೂರಿನಲ್ಲಿ ಇಂದು ನಡೆದಿದೆ.
ಮೃತ ವ್ಯಕ್ತಿಯನ್ನು ಪಲ್ಲಿಪಾಡಿ ಹೊಸಮನೆ ನಿವಾಸಿ ತಿಮ್ಮಪ್ಪ ಆಳ್ವ (52) ಎಂದು ಗುರುತಿಸಲಾಗಿದೆ. ತಿಮ್ಮಪ್ಪ ಅವರು ಇಲೆಕ್ಟ್ರೀಷಿಯನ್ ಆಗಿ ಕೆಲಸ ಮಾಡುತ್ತಿದ್ದರು. ಅಡ್ಡೂರಿನ ಅಪಾರ್ಟ್‌ಮೆಂಟ್ ಒಂದರಲ್ಲಿ ವೈರಿಂಗ್‌ನ ದುರಸ್ತಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಕರೆಂಟ್ ಶಾಕ್ ತಗುಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
Kshetra Samachara
07/11/2021 10:27 pm