ಉಡುಪಿ: ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಕಾರ್ಯಾಚರಣೆ ನಡೆಸಿ ಭಿಕ್ಷಾಟನೆ ಮಾಡುತ್ತಿದ್ದ
ನಾಲ್ವರು ಮಕ್ಕಳನ್ನು ರಕ್ಷಿಸಿದೆ.
ಬಳಿಕ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರೋನಾಲ್ಡ್ ಫುಟಾರ್ಡೋ ಅವರ ಮುಂದೆ ಮಕ್ಕಳನ್ನು ಹಾಜರು ಪಡಿಸಲಾಯಿತು.
ಈ ಅಪ್ರಾಪ್ತ ಮಕ್ಕಳು ಉಡುಪಿ ಸರ್ವಿಸ್ ಬಸ್ ಸ್ಟ್ಯಾಂಡ್, ಮಣಿಪಾಲ್ ಇಂಡಸ್ಟ್ರಿಯಲ್ ಏರಿಯಾ, ಇಂದ್ರಾಳಿ ರೈಲ್ವೆ ಸ್ಟೇಷನ್ ಮತ್ತು ಮಲ್ಪೆ ಬಂದರು ಮುಂತಾದ ಪ್ರದೇಶಗಳಲ್ಲಿ ಭಿಕ್ಷೆ ಬೇಡುತ್ತಿದ್ದರು.
ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್, ಸ್ಫೂರ್ತಿ ವಿಶ್ವಾಸದ ಮನೆ ಶಂಕರಪುರ, ಮಣಿಪಾಲ ಪೊಲೀಸ್ ಠಾಣೆ, ಮಹಿಳಾ ಪೊಲೀಸ್ ಠಾಣೆ ಸಹಕಾರದಲ್ಲಿ ಈ ಕಾರ್ಯಾಚರಣೆ ನಡೆಯಿತು.
ಕಾರ್ಯಾಚರಣೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕುಮಾರ್ ನಾಯಕ್, ರಕ್ಷಣಾಧಿಕಾರಿ ಮಹೇಶ್ ದೇವಾಡಿಗ, ಕಪಿಲ, ಸಾಮಾಜಿಕ ಕಾರ್ಯಕರ್ತರಾದ ಯೋಗೀಶ್, ಸುರಕ್ಷಾ, ಔಟ್ರಿಚ್ ವರ್ಕರ್ ಸಂದೇಶ್, ಸುನಂದಾ, ಜಿಲ್ಲಾ ನಾಗರಿಕ ಸಮಿತಿ ಸಂಚಾಲಕ ನಿತ್ಯಾನಂದ ಒಳಕಾಡು, ಸಾಮಾಜಿಕ ಕಾರ್ಯಕರ್ತ ತಾರಾನಾಥ್ ಮೇಸ್ತ ಶಿರೂರು, ಮಣಿಪಾಲ ಪೊಲೀಸ್ ಠಾಣೆ ಸಿಬ್ಬಂದಿ, ಮಹಿಳಾ ಪೊಲೀಸ್ ಸಿಬ್ಬಂದಿ ಉಡುಪಿ ಹಾಗೂ ಮಕ್ಕಳ ಸಹಾಯವಾಣಿ ಸಿಬ್ಬಂದಿ ಭಾಗಿಯಾಗಿದ್ದರು.
Kshetra Samachara
10/11/2021 10:53 am