ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಸರಣಿ ಮನೆಗಳ್ಳತನ ಯತ್ನ; ನಗದು ಕಳವು, ಕಳ್ಳರ ಚಲನವಲನ ಪತ್ತೆ

ಮಂಗಳೂರು: ನಗರದ ಮಣ್ಣಗುಡ್ಡ ಸಮೀಪ ಗಾಂಧಿನಗರ 5ನೇ ಕ್ರಾಸ್‌ ಬಳಿ 6 ಮನೆಗೆ ಕಳ್ಳರು ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದೆ. ಅಲ್ಲದೆ, 2 ಮನೆಯಿಂದ ಸುಮಾರು 6 ಲಕ್ಷ ರೂ. ಕಳವಾದ ಬಗ್ಗೆ ಬರ್ಕೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಖದೀಮರು ಮನೆಗಳ ಸುತ್ತಮುತ್ತ ಸುತ್ತಾಡುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಇಬ್ಬರು ಸುತ್ತಾಡುತ್ತಿರುವುದು ಕಂಡುಬಂದಿದೆ. ಈ ಕಳ್ಳತನದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆಯಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನಗರದಲ್ಲೀಗ ದ್ವಿಚಕ್ರ ವಾಹನ ಸಹಿತ ಮನೆಗೆ ನುಗ್ಗಿ ಕಳ್ಳತನ ಪ್ರಕರಣಗಳು ಜಾಸ್ತಿಯಾಗುತ್ತಿವೆ. ತಂಡವೊಂದು ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುತ್ತಿದೆಯಾ? ಎಂಬ ಅನುಮಾನ ಮೂಡಿದೆ. ಈ ನಿಟ್ಟಿನಲ್ಲಿಯೂ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Edited By : Manjunath H D
Kshetra Samachara

Kshetra Samachara

11/11/2021 01:55 pm

Cinque Terre

12.24 K

Cinque Terre

1

ಸಂಬಂಧಿತ ಸುದ್ದಿ