ಮಂಗಳೂರು: ಕ್ರೆಡಿಟ್ ಕಾರ್ಡ್ ಮೂಲಕ ಸಾರ್ವಜನಿಕರ ಗಮನಕ್ಕೆ ಬಾರದೆ ಹಣವನ್ನು ಮೋಸದಿಂದ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಳ್ಳುತಿದ್ದ ಪ್ರಕರಣವನ್ನು ಮಂಗಳೂರು ಪೊಲೀಸರು ಬೇಧಿಸಿದ್ದಾರೆ.
ಬಂಧಿತರನ್ನು ಲೋಬಸಂಗ್ ಸಂಗ್ಯೆ, ದಕಪ ಪುಂದೇ ಎಂದು ಗುರುತಿಸಲಾಗಿದೆ.
ವ್ಯಕ್ತಿಯೊಬ್ಬರು ರಾಷ್ಟ್ರೀಕೃತ ಬ್ಯಾಂಕ್‌ನಿಂದ ಕ್ರೆಡಿಟ್ ಕಾರ್ಡ್ ಬಳಸುತ್ತಿದ್ದರು. ಇದರ ವಾರ್ಷಿಕ ಶುಲ್ಕ ಹೆಚ್ಚಾಗಿದ್ದರಿಂದ ಬ್ಯಾಂಕ್‌ಗೆ ಸರೆಂಡರ್ ಮಾಡಿದ್ದರು. ಈ ಮಾಹಿತಿ ತಿಳಿದ ಅಪರಿಚಿತರು ವ್ಯಕ್ತಿ ಖಾತೆಯಿಂದ ಹಂತ ಹಂತವಾಗಿ 1 ಲಕ್ಷದ 12 ಸಾವಿರ ರೂ. ವರ್ಗಾಯಿಸಿದ್ದರು. ಈ ಬಗ್ಗೆ ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು Mobikwik wallet App ಮೂಲಕ ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದ ಫಿನ್‌ಕೇರ್ ಸ್ಮಾಲ್ ಫೈನಾನ್ಸ್ ಬ್ಯಾಂಕ್‌ನ ಎರಡು ಖಾತೆಗಳಿಗೆ ವರ್ಗಾವಣೆಯಾಗಿರುವುದು ಮತ್ತು ಇದನ್ನು ಉತ್ತರ ಕನ್ನಡ ಜಿಲ್ಲೆ ತಟ್ಟಹಳ್ಳಿಯಲ್ಲಿರುವ ಕೆನರಾ ಡಿಸಿಸಿ ಬ್ಯಾಂಕ್‌ನ ಖಾತೆದಾರ ಲೋಬಸಂಗ್ ಸಂಗ್ಯೆ ಬ್ಯಾಂಗಿಸ್ ಎಂಬಾತನ ಖಾತೆಗೆ ವರ್ಗಾವಣೆಯಾಗಿದೆ.
ಈ ಹಿನ್ನೆಲೆಯಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಮಂಗಳೂರು 7ನೇ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಹೆಚ್ಚಿನ ವಿಚಾರಣೆಗಾಗಿ 10 ದಿನಗಳ ವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
Kshetra Samachara
11/11/2021 03:01 pm