ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ್ಕಳ: ಅಕ್ರಮವಾಗಿ ಮರ ಕಡಿದು ಮಾರಾಟ: ಮೂವರ ಬಂಧನ: ಮರದ ದಿಮ್ಮಿ ವಶ

ಕಾರ್ಕಳ: ಅರಣ್ಯ ಇಲಾಖೆಯ ಅನುಮತಿ ಪಡೆಯದೆ ಅಕ್ರಮವಾಗಿ ಮರಗಳನ್ನು ಕಡಿದು ಮಾರಾಟ ಮಾಡಿದ ಆರೋಪದಡಿ, ಮೂವರು ಆರೋಪಿಗಳನ್ನು ಬಂಧಿಸಿದ ಅರಣ್ಯಾಧಿಕಾರಿಗಳು, ಸುಮಾರು 35 ಸಾವಿರ ರೂ. ಮೌಲ್ಯದ ಮರದ ದಿಮ್ಮಿಗಳನ್ನು ಹಾಗೂ ಸಾಗಾಟದ ವಾಹನ ವಶಪಡಿಸಿಕೊಂಡಿದ್ದಾರೆ.

ಕಾರ್ಕಳ ತಾಲೂಕಿನ ಸೂಡಾ ಗ್ರಾಮದ ಗ್ರೊಟ್ಟ ಎಂಬಲ್ಲಿ ಈ ಘಟನೆ ನಡೆದಿದೆ. ಕೆ.ಎಚ್ ಜಮೀರ್, ಮಹಮ್ಮದ್ ರಫಿ ಮತ್ತು ಇಮ್ರಾನ್ ಈ ಸಾಗಾಟದಲ್ಲಿ ಭಾಗಿಯಾದ ಆರೋಪಿಗಳಾಗಿದ್ದಾರೆ.ಬಂಧಿತರಿಂದ ಸಾಗಾಟಕ್ಕೆ ಬಳಸಲಾದ ಲಾರಿ ಹಾಗೂ ದೂಪ, ಮಾವು ಹಾಗೂ ಕಾಡುಜಾತಿಯ ಮರಗಳ ದಿಮ್ಮಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕಾರ್ಕಳ ವಲಯ ಅರಣ್ಯಾಧಿಕಾರಿ ಜಿ.ಡಿ ದಿನೇಶ್ ಮಾರ್ಗದರ್ಶನದಲ್ಲಿ ಉಪ ವಲಯಾರಣ್ಯಧಿಕಾರಿ ಹುಕ್ರಪ್ಪ ಗೌಡ, ಪ್ರಕಾಶ್ಚಂದ್ರ, ಅರಣ್ಯ ರಕ್ಷಕ ಭಾಸ್ಕರ್, ಅವಿನಾಶ್ ಹಾಗೂ ಪ್ರಕಾಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಈ ಕುರಿತು ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ.

Edited By : PublicNext Desk
Kshetra Samachara

Kshetra Samachara

12/11/2021 11:56 am

Cinque Terre

15.43 K

Cinque Terre

0

ಸಂಬಂಧಿತ ಸುದ್ದಿ