ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು: ಲೈಂಗಿಕ ದೌರ್ಜನ್ಯ ಕೇಸ್; ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ ಆರೋಪಿ ಸಾವು

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಪಟ್ಟೆ ನಿವಾಸಿ ಆದಂ ಕುಂಞ (52 ) ಮೇಲೆ ದಲಿತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಆರೋಪವಿತ್ತು. ಈ ಹಿನ್ನೆಲೆಯಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆದಂ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು.

ಈ ಸಂಬಂಧ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ ಆದಂ ಎರಡು ದಿನಗಳ ಹಿಂದೆ ಅಸ್ವಸ್ಥರಾಗಿದ್ದು, ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

ಪೊಲೀಸರಿಂದ ಬಂಧಿತರಾಗಿ 12 ದಿನ ನ್ಯಾಯಾಂಗ ಬಂಧನದಲ್ಲಿದ್ದರು. ಕೆಲವೇ ದಿನಗಳ ಹಿಂದೆ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಆದಂ, ಈ ಘಟನೆಯಿಂದ ತೀವ್ರವಾಗಿ ನೊಂದು ಕೊಂಡಿದ್ದಲ್ಲದೆ ಊಟ, ನಿದ್ದೆಯನ್ನು ಸಂಪೂರ್ಣವಾಗಿ ಬಿಟ್ಟು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ಕುಟುಂಬ ವರ್ಗ‌ ತಿಳಿಸಿದೆ.

Edited By : Nirmala Aralikatti
Kshetra Samachara

Kshetra Samachara

12/11/2021 04:06 pm

Cinque Terre

10.11 K

Cinque Terre

0

ಸಂಬಂಧಿತ ಸುದ್ದಿ