ಮಂಗಳೂರು: ಬಸ್ ಸಿಬ್ಬಂದಿಯೇ ಮತ್ತೊಂದು ಬಸ್ ಗೆ ಕಲ್ಲು ತೂರಾಟ ನಡೆಸಿರುವ ಘಟನೆ ನಗರದ ಕೊಟ್ಟಾರ ಚೌಕಿಯಲ್ಲಿ ನಡೆದಿದೆ.
ಉಡುಪಿಯಿಂದ ಮಂಗಳೂರಿಗೆ ಬರುತ್ತಿದ್ದ ಎ.ಕೆ.ಎಂ.ಎಸ್. ಹೆಸರಿನ ಖಾಸಗಿ ಎಕ್ಸ್ ಪ್ರೆಸ್ ಬಸ್ಸಿಗೆ ಕೊಟ್ಟಾರ ಚೌಕಿಯಲ್ಲಿ ಕಲ್ಲು ತೂರಾಟ ನಡೆಸಲಾಗಿದೆ. ಪರಿಣಾಮ ಬಸ್ ನ ಮುಂಭಾಗದ ಗಾಜು ಎರಡು ಕಡೆಯಲ್ಲಿ ಹಾನಿಯಾಗಿದೆ.
ದ್ವಿಚಕ್ರ ವಾಹನದಲ್ಲಿ ಬಂದಿರುವ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಈ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಟೈಮಿಂಗ್ ವಿಚಾರದಲ್ಲಿ ಮತ್ತೊಂದು ಬಸ್ ನಿರ್ವಾಹಕರೇ ಕಲ್ಲು ತೂರಾಟ ನಡೆಸಿದ್ದಾರೆ ಎಂದು ದೂರು ದಾಖಲಾಗಿದೆ.
Kshetra Samachara
15/11/2021 05:05 pm