ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಳ್ಯ: ಪ್ರವಾದಿ ಬಗ್ಗೆ ಅವಹೇಳನಕಾರಿ ಪದ ಬಳಕೆ; ಒಬ್ಬನ ಬಂಧನ

ಸುಳ್ಯ: ಪ್ರವಾದಿ ಬಗ್ಗೆ ಅವಹೇಳನಕಾರಿ ಪದ ಬಳಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ

ಐವರ್ನಾಡು ಗ್ರಾಮದ ಕೈವಲ್ತಡ್ಕ ನಿವಾಸಿ ಜಗದೀಶ್ ಕೈವಲ್ತಡ್ಕ ಎಂಬಾತನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.

ಜಗದೀಶ್ ತನ್ನ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪದ ಬಳಕೆ ಮಾಡಿರುವ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ನಂತರ ಸುಳ್ಯ ಮುಸ್ಲಿಂ ಒಕ್ಕೂಟದ ಸಂಚಾಲಕ ಇಕ್ಬಾಲ್ ಎಲಿಮಲೆ ನೇತೃತ್ವದಲ್ಲಿ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ದೂರು ನೀಡಲಾಗಿತ್ತು.

Edited By : Nagaraj Tulugeri
Kshetra Samachara

Kshetra Samachara

15/11/2021 10:04 pm

Cinque Terre

18.14 K

Cinque Terre

2

ಸಂಬಂಧಿತ ಸುದ್ದಿ