ಮಂಗಳೂರು: ಅಕ್ರಮ ಸಾಗಾಟದ 34.32 ಲಕ್ಷ ರೂ. ಮೌಲ್ಯದ ಚಿನ್ನವನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ದುಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಆತನಲ್ಲಿ ಅಕ್ರಮ ಚಿನ್ನ ಪತ್ತೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮೂಲದ ಈ ಪ್ರಯಾಣಿಕ ಚಿನ್ನವನ್ನು ಪೇಸ್ಟ್ ರೂಪದಲ್ಲಿ ದೇಹದಲ್ಲಿ ಬಚ್ಚಿಟ್ಟು ಕಳ್ಳಸಾಗಣೆ ಮಾಡುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈತನಿಂದ 681 ಗ್ರಾಂ ತೂಕದ 34,32,240 ಲಕ್ಷ ರೂ. ಮೌಲ್ಯದ ಚಿನ್ನ ಸಹಿತ ಪ್ರಯಾಣಿಕನನ್ನು ಅಧಿಕಾರಿಗಳು ಬಂಧಿಸಿದ್ದಾರೆ.
Kshetra Samachara
19/11/2021 07:46 pm