ಉಡುಪಿ;ನಗರದ ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಪ್ರಾಪ್ತ ಬಾಲಕಿ ಅಸಹಾಯಕ ಸ್ಥಿತಿಯಲ್ಲಿರುವ ಬಗ್ಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಕ್ಕಳ ಸಹಾಯವಾಣಿಯಿಂದ ದೂರು ಬಂದಿತ್ತು. ಕಾರ್ಯಾಕರ್ತರಾದ ಯೋಗೀಶ್, ಸುರಕ್ಷಾ, ಮಕ್ಕಳ ಸಹಾಯವಾಣಿಯ ಸಿಬ್ಬಂದಿ ಪ್ರಮೋದ್, ನಯನ, ಮತ್ತು ಉಡುಪಿ ಜಿಲ್ಲಾ ನಾಗರೀಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ಸಹಸಂಚಾಲಕ ತಾರಾನಾಥ್ ಮೇಸ್ತ ಶಿರೂರು ಅವರು ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಬಾಲಕಿಯನ್ನು ಸಮಾಲೋಚನೆಗೆ ಒಳಪಡಿಸಿದರು.
ಹೆಬ್ರಿಯಲ್ಲಿರುವ ಗೇರುಬೀಜ ಕಾರ್ಖಾನೆಯಲ್ಲಿ ಕೆಲಸ ಮಾಡುತಿದ್ದೆ, ಅಲ್ಲಿ ಕೆಲಸ ತುಂಬ ಕಠಿಣವಾಗಿರುವುದರಿಂದ, ಕಾರ್ಖಾನೆಯ ಮಾಲೀಕರಿಗೆ ಹೇಳದೆ, ಸ್ವಂತ ಊರಾದ ಮಧ್ಯಪ್ರದೇಶಕ್ಕೆ ಹೋಗಲು ನಿರ್ಧರಿಸಿ ಇಂದ್ರಾಳಿ ರೈಲು ನಿಲ್ದಾಣಕ್ಕೆ ಬಂದಿರುವುದಾಗಿ ಬಾಲಕಿ ಹೇಳಿಕೆ ನೀಡಿದ್ದಳು. ನಂತರ ಅಪ್ರಾಪ್ತ ಬಾಲಕಿಯನ್ನು ರಕ್ಷಣೆ ಮಾಡಿ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರ ಮೌಖಿಕ ಆದೇಶದಂತೆ ಬಾಲಕಿಯರ ಬಾಲಮಂದಿರ ನಿಟ್ಟೂರಿನಲ್ಲಿ ತಾತ್ಕಾಲಿಕ ಪುನರ್ವಸತಿಯನ್ನು ಕಲ್ಪಿಸಲಾಯಿತು.
Kshetra Samachara
20/11/2021 08:17 pm