ಅಲೆವೂರು: ಖಾಸಗಿ ಶಾಲಾ ಶಿಕ್ಷಕಿಯೊಬ್ಬರು ಕೆಲಸದ ಒತ್ತಡದಿಂದ ಖಿನ್ನತೆಗೆ ಒಳಗಾಗಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಅಲೆವೂರಿನಲ್ಲಿ ನಡೆದಿದೆ. ಅಮೃತಾ (32) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ. ಅವರು ಕಳೆದ 8 ವರ್ಷದಿಂದ ಉಡುಪಿಯ ವಿದ್ಯೋದಯ ಪಬ್ಲಿಕ್ ಸ್ಕೂಲ್ ನಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಇತ್ತೀಚೆಗೆ ಕೆಲಸದ ಒತ್ತಡದಿಂದ ಖಿನ್ನತೆಗೆ ಒಳಗಾಗಿದ್ದ ಅವರು ನಿನ್ನೆ ರಾತ್ರಿ ತಾನು ವಾಸವಿದ್ದ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೃತರು ಪತಿ ಹಾಗೂ ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.ಈ ಬಗ್ಗೆ ಮೃತರ ತಂದೆ ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
22/11/2021 09:44 pm