ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ; ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಸಿಎಫ್ಐ ಆಗ್ರಹ

ಮಂಗಳೂರು: ನಗರದ ಉಳಾಯಿಬೆಟ್ಟು ಪರಾರಿಯಲ್ಲಿರುವ ಟೈಲ್ಸ್ ಫ್ಯಾಕ್ಟರಿಯಲ್ಲಿ ನಡೆದ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಹಾಗೂ ಕೊಲೆಯನ್ನು ಖಂಡಿಸಿ ಶೀಘ್ರ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ(ಸಿಎಫ್ಐ) ವತಿಯಿಂದ ನಗರದ ಹೊರವಲಯದ ಪರಾರಿ ಜಂಕ್ಷನ್ ಬಳಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನುದ್ದೇಶಿಸಿ ಉಳಾಯಿಬೆಟ್ಟು 2ನೇ ವಾರ್ಡ್ ಗ್ರಾಪಂ ಸದಸ್ಯ ಅಝರ್ ಉಳಾಯಿಬೆಟ್ಟು ಮಾತನಾಡಿ, ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದಲ್ಲಿ ಮಾತ್ರ ಇಂತಹ ದುರ್ಘಟನೆಗಳಿಗೆ ಕಡಿವಾಣ ಹಾಕಲು ಸಾಧ್ಯ. ಅಲ್ಲದೆ ಜಿಲ್ಲಾಡಳಿತವು ಹೊರ ರಾಜ್ಯದಿಂದ, ಹೊರ ಜಿಲ್ಲೆಯಿಂದ ಬರುವಂತಹ ವಲಸೆ ಕಾರ್ಮಿಕರ ಮೇಲೆ ನಿಗಾ ಇರಿಸುವ ಅಗತ್ಯವಿದೆ. ಉತ್ತರ ಪ್ರದೇಶ, ಬಿಹಾರ ರಾಜ್ಯಗಳ ಕಾರ್ಮಿಕರಿದ್ದಲ್ಲಿ ಇವರ ಬಗ್ಗೆ ಜಿಲ್ಲಾಡಳಿತ ಹೆಚ್ಚಿನ ಮುತುವರ್ಜಿ ವಹಿಸಿ, ಸೂಕ್ಷ್ಮವಾಗಿ ಗಮನಿಸುತ್ತಿರಬೇಕು ಎಂದರು.

ಸಿಎಫ್ಐ ಜಿಲ್ಲಾಧ್ಯಕ್ಷ ಸಫ್ರಾರ್ಝ್ ಮಾತನಾಡಿ, ಪೊಲೀಸ್ ಇಲಾಖೆ ಈ ಘಟನೆ ಬಗ್ಗೆ ಯಾವುದೇ ಒತ್ತಡಕ್ಕೆ ಮಣಿಯದೆ ಸಮಗ್ರ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿ, ಕಠಿಣ ಶಿಕ್ಷೆ ವಿಧಿಸಬೇಕೆಂದು ಮನವಿ ಮಾಡಿದರು.

Edited By : Shivu K
Kshetra Samachara

Kshetra Samachara

23/11/2021 10:14 am

Cinque Terre

17.27 K

Cinque Terre

3