ಮಂಗಳೂರು:ಕನ್ನಡ ಖಾಸಗಿ ನ್ಯೂಸ್ ಚಾನೆಲ್ ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನೋರ್ವನ ಮೇಲೆ ನಿನ್ನೆ ಸಂಜೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.
ಸುಖ್‍ಪಾಲ್ ಪೊಳಲಿ ಹಲ್ಲೆಗೊಳಗಾದ ಪತ್ರಕರ್ತ. ನಿನ್ನೆ ಸಂಜೆ ವ್ಯಕ್ತಿಯೊಬ್ಬ ಏಕಾಏಕಿ ಬಂದು ಸುಖ್‍ಪಾಲ್ ಪೊಳಲಿ ಮೇಲೆ ಮಾರಾಕಾಯುಧದಿಂದ ತಲೆಯ ಭಾಗಕ್ಕೆ ಹಲ್ಲೆ ನಡೆಸಿದ್ದಾನೆ.
ಹಲ್ಲೆ ನಡೆಸಿದ ಆರೋಪಿಯನ್ನು ವಕೀಲ ಯದುನಂದನ್ ಎಂದು ಹೇಳಲಾಗಿದ್ದು,ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ವೈಯಕ್ತಿಕ ವಿಚಾರದ ದ್ವೇಷದ ಹಿನ್ನೆಲೆಯಲ್ಲಿ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಸುಖ್‍ಪಾಲ್ ಪೊಳಲಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಉರ್ವ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
Kshetra Samachara
23/11/2021 03:27 pm