ಪುತ್ತೂರು: ಕಾಲೇಜ್‍ನಲ್ಲಿ ವಿದ್ಯಾರ್ಥಿನಿಯೊಂದಿಗೆ ಮಾತನಾಡಿದ ಕಾರಣಕ್ಕೆ ವಿದ್ಯಾರ್ಥಿಯೋರ್ವನ ಮೇಲೆ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಲ್ಲಿ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿ ಓರ್ವ ವಿದ್ಯಾರ್ಥಿ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಹಾಗೂ ಇಬ್ಬರು ವಿದ್ಯಾರ್ಥಿಗಳು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಾಲೇಜ್‍ನಲ್ಲಿ ವಿದ್ಯಾರ್ಥಿನಿಯೊಂದಿಗೆ ಮಾತನಾಡಿದ ಎಂಬ ಕಾರಣಕ್ಕೆ 15 ಮಂದಿ ವಿದ್ಯಾರ್ಥಿಗಳ ತಂಡವು ಕಾಲೇಜ್‍ನಲ್ಲಿ ತನ್ನ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದೆ ಎಂದು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುವ ವಿದ್ಯಾರ್ಥಿ ತಿಳಿಸಿದ್ದಾನೆ.
ಇದೇ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ದಾಖಲಾಗಿ ತಮ್ಮ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ. ಎಲ್ಲ ವಿದ್ಯಾರ್ಥಿಗಳೂ ಪಿಯುಸಿ ಕಲಿಯುತ್ತಿದ್ದಾರೆ.
ವಿದ್ಯಾರ್ಥಿನಿಯಲ್ಲಿ ಮಾತನಾಡಿದ ವಿದ್ಯಾರ್ಥಿಗೆ ಹಲ್ಲೆ ನಡೆಸಿದ ತಂಡವು ಎಬಿವಿಪಿ ಕಾರ್ಯಕರ್ತರಾಗಿದ್ದಾರೆ.
ವಿದ್ಯಾರ್ಥಿಯ ಮೇಲಿನ ಹಲ್ಲೆ ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ಪುತ್ತೂರು ಬಸ್ ನಿಲ್ದಾಣ ಬಳಿಯ ಗಾಂಧಿಕಟ್ಟೆ ಮುಂಭಾಗ ಪ್ರತಿಭಟನೆ ನಡೆಯಿತು.
Kshetra Samachara
23/11/2021 09:51 pm