ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜಿಲ್ಲೆಯಲ್ಲಿ ಹೆಚ್ಚುತ್ತಲೇ ಇದೆ ಆತ್ಮಹತ್ಯೆ: ಪ್ರತ್ಯೇಕ ಪ್ರಕರಣಗಳಲ್ಲಿ ಮೂವರ ಆತ್ಮಹತ್ಯೆ

ಕಾರ್ಕಳ/ ಪಡುಬಿದ್ರೆ: ಜಿಲ್ಲೆಯಲ್ಲಿ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದ್ದು ಬೇರೆ ಬೇರೆ ಕಾರಣಗಳಿಂದಾಗಿ ಜನ ಆತ್ಮಹತ್ಯೆಗೆ ಶರಣಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಅನಾರೋಗ್ಯ ಹಾಗೂ ವಿಪರೀತ ಮದ್ಯಪಾನ ಸೇವನೆ ಚಟದಿಂದ ಮಾನಸಿಕವಾಗಿ ನೊಂದ ಭಾಸ್ಕರ್ ಶೆಟ್ಟಿ ಎಂಬವರ ಮಗ ಅನಿಲ್ ಶೆಟ್ಟಿ(54) ಎಂಬವರು ನಿನ್ನೆ ಮನೆಯ ಬಾವಿಯ ರಾಟೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ವಿಪರೀತ ಮದ್ಯ ಸೇವನೆ ಚಟ ಹೊಂದಿದ್ದ ಸುಕ್ರು ಪೂಜಾರಿ(65) ಎಂಬವರು ಯಡ್ತಾಡಿ ಗ್ರಾಮದ ಕಂಬಳಗದ್ದೆ ರಸ್ತೆಯ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಕೊರೋನಾದಿಂದ ಉದ್ಯೋಗ ಇಲ್ಲದ ಚಿಂತೆಯಲ್ಲಿ ಹಾಗೂ ಪತ್ನಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿರುವುದರಿಂದ ಮನನೊಂದು ಪಡುಬಿದ್ರಿ ಬೀಚ್ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಉದಯ್ (35) ಎಂಬವರು ನಿನ್ನೆ ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By :
Kshetra Samachara

Kshetra Samachara

24/11/2021 05:11 pm

Cinque Terre

10.01 K

Cinque Terre

0

ಸಂಬಂಧಿತ ಸುದ್ದಿ