ಬಜಪೆ:ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಾವೂರು ಕಟ್ಟೆ ಪರಿಸರದ ಬಾಡಿಗೆ ಮನೆಯೊಂದರಲ್ಲಿ ಅಕ್ರಮ ಲಾಭ ಗಳಿಸುವ ಸಮಾನ ಉದ್ದೇಶದಿಂದ ಬೆಂಗಳೂರು , ಮಂಗಳೂರು, ಮೈಸೂರು, ಉಡುಪಿ ಹಾಗೂ ಇತರ ಕಡೆಗಳಲ್ಲಿನ ಯುವತಿಯರನ್ನು ಮಹಿಳೆಯರನ್ನು ಮಾನವ ಕಳ್ಳಸಾಗಾಟ ಮೂಲಕ ಮಂಗಳೂರಿಗೆ ಕರೆಯಿಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಾರೆಂಬ ಖಚಿತ ಮಾಹಿತಿಯ ಮೇರೆಗೆ ಮಂಗಳೂರು ಸಿಸಿಬಿ ಘಟಕದ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ ದಂಧೆಯಲ್ಲಿ ನಿರತರಾಗಿದ್ದ ಇಬ್ಬರನ್ನು ಬಂಧಿಸಿದ್ದಾರೆ.
ಉಡುಪಿಯ ಉಳಿಯಾರ್ ಗೋಳಿ ನಿವಾಸಿ ಅಬ್ದುಲ್ ಹಫೀಸ್(55) ಹಾಗೂ ಕೃಷ್ಣಾಪುರ ಕಾಟಿಪಳ್ಳದ ನಿವಾಸಿ ರಮ್ಲಾತ್ (46) ಬಂಧಿತರು.
ವೇಶ್ಯಾವಾಟಿಕೆ ದಂಧೆಯಲ್ಲಿ ನಿರತಳಾಗಿದ್ದ ಒಬ್ಬಳು ಸಂತ್ರಸ್ತೆ ಯುವತಿಯನ್ನು ರಕ್ಷಿಸಲಾಗಿದೆ.ಬಂಧಿತರಿಂದ 10,060/- ರೂ ನಗದು, 3 ಮೊಬೈಲ್ ಫೋನುಗಳು ಮತ್ತು ಸ್ಕಾರ್ಪಿಯೋ ಕಾರು ಒಟ್ಟು ರೂ. 3,25,560/- ಮೊತ್ತದ ಸೊತ್ತನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ. ಘಟನೆಯ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
26/11/2021 07:54 pm