ಮಂಗಳೂರು: ದ.ಕ.ಜಿಲ್ಲೆಯ ಕುಷ್ಠರೋಗ ನಿವಾರಣಾಧಿಕಾರಿ ಡಾ.ರತ್ನಾಕರ್ ಮೇಲೆ ಮಂಗಳೂರಿನ ಮಹಿಳಾ ಕಾರ್ಯಕರ್ತೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳ ಆರೋಪದ ದೂರು ದಾಖಲಿಸಿದ್ದಾರೆ.
ಮಹಿಳಾ ಪರ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಈ ಮಹಿಳೆ, ವೈದ್ಯಾಧಿಕಾರಿ ಡಾ.ರತ್ನಾಕರ್ ಮೇಲೆ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಎನ್. ಅವರಿಗೆ ದೂರು ಸಲ್ಲಿಸಿದ್ದಾರೆ. ಈ ವೈದ್ಯ ತನ್ನ ಕಚೇರಿಯ ಮಹಿಳಾ ಸಿಬ್ಬಂದಿಯೊಂದಿಗೆ ಚೆಲ್ಲಾಟವಾಡಿರುವ ವೀಡಿಯೊ, ಫೋಟೋ ಸಹಿತ ಇಂದು ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗಿದೆ. ಈ ಹಿನ್ನೆಲೆಯಲ್ಲಿ ಮಹಿಳಾ ಸಿಬ್ಬಂದಿಗೆ ಆತ ಲೈಂಗಿಕ ಕಿರುಕುಳ ನೀಡಿದ್ದಾನೆಂದು ಆರೋಪಿಸಿ ದೂರು ದಾಖಲಾಗಿದೆ.
ಮಂಗಳೂರು ಮಹಿಳಾ ಠಾಣೆ ಪೊಲೀಸರು ತಮ್ಮ ಸಂಪರ್ಕಕ್ಕೆ ಸಿಕ್ಕಿರುವ ಮಹಿಳಾ ಸಿಬ್ಬಂದಿಯೊಂದಿಗೆ ವಿಚಾರಣೆ ನಡೆಸಿದ್ದಾರೆ. ಆದರೆ, ಎಲ್ಲರೂ ಆತನ ವಿರುದ್ಧ ದೂರು ನೀಡಲು ಹಿಂಜರಿದಿದ್ದಾರೆ. ತನಿಖೆಗೆ ಸಹಕಾರ ನೀಡುತ್ತೇವೆ ಎಂದು ಹೇಳಿದ್ದಾರೆ. ಇದೀಗ ಡಾ.ರತ್ನಾಕರ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್. ತಿಳಿಸಿದ್ದಾರೆ.
Kshetra Samachara
26/11/2021 08:18 pm