ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳ್ತಂಗಡಿ: ಹೊಳೆಯಲ್ಲಿ ಮುಳುಗಿ ಯುವಕ ಸಾವು

ಬೆಳ್ತಂಗಡಿ: ಮೂವರು ಗೆಳೆಯರ ಜೊತೆ ಇಂದು ಮಧ್ಯಾಹ್ನ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕುತ್ರೊಟ್ಟು ದೇವರಗುಂಡಿ ಹೊಳೆಯಲ್ಲಿ ಸ್ನಾನ ಮಾಡಲು ಹೋಗಿದ್ದ ಯುವಕ ಮುಳುಗಿ ಮೃತಪಟ್ಟಿದ್ದಾನೆ.

ಈ ಯುವಕ ನೀರಿನ ಸುಳಿಗೆ ಸಿಲುಕಿ, ಮುಳುಗಿದ್ದಾನೆ. ತಕ್ಷಣ ಸ್ಥಳೀಯರ ಸಹಕಾರದಿಂದ ಹೊಳೆಯಲ್ಲಿ ಹುಡುಕಾಟ ನಡೆಸಿ, ಯುವಕನನ್ನು ತೀರಕ್ಕೆ ತಂದು ಪ್ರಾಥಮಿಕ ಚಿಕಿತ್ಸೆ ನೀಡಿದಾಗ ಯುವಕ ಉಸಿರಾಟ ನಡೆಸುತ್ತಿದ್ದ. ಆ ಕೂಡಲೇ ಆಂಬ್ಯುಲೆನ್ಸ್ ಮೂಲಕ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆಯೇ ಮೃತಪಟ್ಟಿದ್ದಾನೆ.

ಮೃತಪಟ್ಟ ಯುವಕ ಲಾಯಿಲ ಗ್ರಾಮದ ಕಾಶಿಬೆಟ್ಟು ನಿವಾಸಿ ಇಸ್ಮಾಯಿಲ್ ಎಂಬವರ ಮಗ ನಬಾನ್(22) ಎಂದು ಗುರುತಿಸಲಾಗಿದೆ.

ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಶವಾಗಾರಕ್ಕೆ ಸಾಗಿಸಲಾಗಿದ್ದು, ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By :
Kshetra Samachara

Kshetra Samachara

28/11/2021 06:26 pm

Cinque Terre

10 K

Cinque Terre

0

ಸಂಬಂಧಿತ ಸುದ್ದಿ