ಮಂಗಳೂರು: ನಗರದ ಫಳ್ನೀರ್‌ನ ನರ್ಸಿಂಗ್ ಕಾಲೇಜೊಂದರ ಕೇರಳ ಮೂಲದ ವಿದ್ಯಾರ್ಥಿಗಳನ್ನು ತಮ್ಮ ಕೊಠಡಿಗೆ ಬಲವಂತವಾಗಿ ಕರೆದೊಯ್ದು ಅಕ್ರಮ ಬಂಧನದಲ್ಲಿಟ್ಟು, ಗಡ್ಡ ಬೋಳಿಸಿ, ಹಣ ನೀಡುವಂತೆ ಪೀಡಿಸಿ ಬಳಿಕ ಹಲ್ಲೆ ನಡೆಸಿ, ಕೊಲೆ ಬೆದರಿಕೆಯೊಡ್ಡಿದ ಆರೋಪದಲ್ಲಿ 9 ಮಂದಿಯನ್ನು ಪಾಂಡೇಶ್ವರ ಪೊಲೀಸರು ಇಂದು ಬಂಧಿಸಿದ್ದಾರೆ.
ಬಂಧಿತರನ್ನು ಅಭಿ, ಅಲೆಕ್ಸ್, ನಂದು, ಶ್ರೀಕುಮಾರ್, ಶಿಹಾಸ್, ಪ್ರವೀಶ್, ಗೋಪಿಕೃಷ್ಣ, ಹಸನ್, ವಿಷ್ಣು, ಜಾಸಿಲ್, ಅಲೆನ್ ಎಂದು ಗುರುತಿಸಲಾಗಿದೆ. ಇವರನ್ನು ರೈಲ್ವೆ ನಿಲ್ದಾಣ ಬಳಿಯಿಂದ ಬಂಧಿಸಲಾಗಿದೆ. ಈ ಪೈಕಿ 7 ಮಂದಿ ಗಾಂಜಾ ಸೇವನೆ ಮಾಡಿದ್ದು, ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ದೃಢಪಟ್ಟಿದೆ. ಬಂಧಿತರಲ್ಲಿ ಓರ್ವ ಸಂತ್ರಸ್ತ ವಿದ್ಯಾರ್ಥಿಗಳ ಸೀನಿಯರ್ ಆಗಿದ್ದು, ಏಳು ಮಂದಿ ಬಲ್ಮಠದ ನರ್ಸಿಂಗ್ ಕಾಲೇಜಿನ ಕೇರಳ ಮೂಲದ ವಿದ್ಯಾರ್ಥಿಗಳಾಗಿದ್ದಾರೆ.
Kshetra Samachara
28/11/2021 09:53 pm