ಉಡುಪಿ: ಕೋವಿಡ್ ನಿಯಮಾವಳಿ ಉಲ್ಲಂಘಿಸಿ, ಮೆರವಣಿಗೆ ನಡೆಸಿದ ಸಿಪಿಎಂ ಮುಖಂಡರ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿಪಿಐ(ಎಂ) ನ ಜಿಲ್ಲಾ ಸಮ್ಮೇಳನದ ಅಂಗವಾಗಿ ಸಿಪಿಎಂ ಮುಖಂಡರು ಹಾಗೂ ಕಾರ್ಯಕರ್ತರು, ಉಡುಪಿ ಬೋರ್ಡ್ ಹೈಸ್ಕೂಲಿನಿಂದ ಬ್ರಹ್ಮಗಿರಿ ವೃತ್ತದ ತನಕ ಮೆರವಣಿಗೆ ನಡೆಸಿದ್ದರು.
ಮೆರವಣಿಗೆಯಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿರುವುದಾಗಿ ಪೌರಾಯುಕ್ತ ಡಾ.ಉದಯ ಕುಮಾರ್ ಶೆಟ್ಟಿ ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಉಡುಪಿ ನಗರ ಠಾಣೆಯಲ್ಲಿ ಸಿಪಿಎಂ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Kshetra Samachara
01/12/2021 01:03 pm