ಮಂಗಳೂರು: ನಗರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪಾರ್ಕಿಂಗ್ ಏರಿಯಾದಲ್ಲಿ ಪರವಾನಿಗೆ ಇಲ್ಲದ ನಾಡಕೋವಿಯನ್ನು ಹೊಂದಿದ್ದ ಯುವಕನೋರ್ವನನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.
ಉಡುಪಿ ತಾಲೂಕಿನ ಬ್ರಹ್ಮಾವರ ಹಾವಂಜೆಯ ರೊನಾಲ್ಡ್ ಡಿಸೋಜ (24) ಬಂಧಿತ ಆರೋಪಿ.
ಮಂಗಳವಾರ ಸಂಜೆಯ ವೇಳೆಗೆ ಏರ್ ಇಂಡಿಯಾ ವಿಮಾನದಲ್ಲಿ ಕುವೈತ್ ನಿಂದ ಬರುತ್ತಿರುವ ತನ್ನ ಸಂಬಂಧಿಕರೋರ್ವರನ್ನು ಕರೆದುಕೊಂಡು ಬರಲೆಂದು ಆರೋಪಿ ರೊನಾಲ್ಡ್ ಡಿಸೋಜ ಮಂಗಳೂರಿನ ಏರ್ ಪೋರ್ಟ್ ಗೆ ಬಂದಿದ್ದ. ಈತ ಪಾರ್ಕಿಂಗ್ ಪ್ರದೇಶದಲ್ಲಿ ಕಾರನ್ನು ನಿಲ್ಲಿಸಿದ್ದು, ಈ ವೇಳೆ ವಿಮಾನ ನಿಲ್ದಾಣದ ಸಿಐಎಸ್‌ಎಫ್ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಈಗ ಈತ ಬಂದಿದ್ದ ಕಾರಿನಲ್ಲಿ ಪರವಾನಿಗೆ ಇಲ್ಲದ ಎರಡು ನಾಡಕೋವಿಗಳು ಪತ್ತೆಯಾಗಿದೆ.
ಈ ಬಗ್ಗೆ ಬಜ್ಪೆ ಪೊಲೀಸರು ಪ್ರಕರಣ ದಾಖಲಿಸಿ, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
Kshetra Samachara
03/12/2021 09:40 am