ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಹಾಸ್ಟೆಲ್ ವಿದ್ಯಾರ್ಥಿಗಳ ಇತ್ತಂಡ ಮಧ್ಯೆ ಹೊಡೆದಾಟ, ಪೊಲೀಸ್ ಮೇಲೆ ಹಲ್ಲೆ; 9 ಮಂದಿ ಅರೆಸ್ಟ್

ಮಂಗಳೂರು: ನಗರದ ಮಂಗಳಾದೇವಿ ಸಮೀಪದ ಗುಜ್ಜರಕೆರೆ ಸಮೀಪದ ಪದವಿ ಕಾಲೇಜೊಂದರ ವಸತಿ ನಿಲಯದ ವಿದ್ಯಾರ್ಥಿಗಳ ಇತ್ತಂಡ ನಡುವಿನ ಹೊಡೆದಾಟ ಹಾಗೂ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 9 ಮಂದಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ.

ಆದಿತ್ಯ, ಕೆನ್ ಜಾನ್ಸನ್, ಮುಹಮ್ಮದ್, ಅಬ್ದುಲ್ ಶಾಹಿದ್, ವಿಮಲ್, ಫಹಾದ್, ಅಬುತಹರ್, ಮುಹಮ್ಮದ್ ನಾಸಿಫ್, ಆದರ್ಶ ಬಂಧಿತ ಆರೋಪಿಗಳು. ಅಲ್ಲದೆ ಒಟ್ಟು 16 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ವಿದ್ಯಾರ್ಥಿಗಳು ಹಾಗೂ ಐವರು ಪೊಲೀಸರು ಗಾಯಗೊಂಡಿದ್ದಾರೆ. ತೃತೀಯ ವರ್ಷದ ಬಿಎಸ್ಸಿ ಹಾಸ್ಪಿಟಾಲಿಟಿ ಸೈನ್ಸ್ ವ್ಯಾಸಂಗ ಮಾಡುತ್ತಿರುವ ಕೇರಳ ಮೂಲದ ಆದರ್ಶ ಪ್ರೇಮಕುಮಾರ್ ಎಂಬ ವಿದ್ಯಾರ್ಥಿಯು ತನ್ನ ಸ್ನೇಹಿತೆ ಅಭಿರಾಮಿ ಎಂಬಾಕೆಯನ್ನು ನಿನ್ನೆ ಸಂಜೆ ಸುಮಾರು 7 ಗಂಟೆಗೆ ಭೇಟಿ ಮಾಡಿ ಮಾತನಾಡುತ್ತಿದ್ದ. ಈ ಸಂದರ್ಭ ಸಿನಾನ್ ಎಂಬಾತ ಹಾಗೂ ಇತರ 8 ಜನ ಇಂಟರ್ ಲಾಕ್ ಹಾಗೂ ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ. ಪರಿಣಾಮ ಆದರ್ಶ ಹಾಗೂ ಮೊಹಮ್ಮದ್ ನಸಿಫ್ ಗಾಯಗೊಂಡಿದ್ದಾರೆ.

ಅಲ್ಲದೆ ಈ ಜಗಳವನ್ನು ಬಿಡಿಸಲು ಬಂದಿದ್ದ ಆದರ್ಶನ ಸ್ನೇಹಿತರಾದ ಅದೇ ಹಾಸ್ಟೆಲ್ ನ ಶೆನಿನ್ ಹಾಗೂ ಶ್ರವಣ್ ಎಂಬ ವಿದ್ಯಾರ್ಥಿಗಳಿಗೆ ಜೀವ ಬೆದರಿಕೆ ಒಡ್ಡಿರುವುದಾಗಿ ಆದರ್ಶ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾತ್ರಿ 10 ಗಂಟೆ ಸುಮಾರಿಗೆ ಪಿಎಸ್‌ಐ ಶೀತಲ್ ಹಾಗೂ ಸಿಬ್ಬಂದಿ ಹಾಸ್ಟೆಲ್ ಬಳಿ ಹೋದಾಗ ಹಾಸ್ಟೆಲ್ ನ ವಿದ್ಯಾರ್ಥಿಗಳು ಇಂಟರ್ ಲಾಕ್, ಕಲ್ಲು ಹಾಗೂ ಕುರ್ಚಿಗಳನ್ನು ಎಸೆದು ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು,ತನಿಖೆ ಮುಂದುವರಿದಿದೆ. ಇದೀಗ ಮಂಗಳೂರು ಪೊಲೀಸ್ ಕಮಿಷನರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By : Manjunath H D
Kshetra Samachara

Kshetra Samachara

03/12/2021 10:28 am

Cinque Terre

17.37 K

Cinque Terre

2

ಸಂಬಂಧಿತ ಸುದ್ದಿ