ಮಣಿಪಾಲ: ವಲಸೆ ಕಾರ್ಮಿಕ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಪಡುಅಲೆವೂರಿನಲ್ಲಿ ನಡೆದಿದೆ.
ಐಹೊಳೆಯ ಮಂಜುನಾಥ ಗುರಕಿ (44 ) ಮೃತಪಟ್ಟವರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಶವವನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಶವ ಸಾಗಿಸಲು ಉಚಿತ ಆ್ಯಂಬುಲೆನ್ಸ್ ಸೇವೆ ನೀಡಿ ಇಲಾಖೆಗೆ ಸಹಕರಿಸಿದರು.
ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
03/12/2021 04:24 pm