ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಪ್ಪಿನಂಗಡಿ: ಐವರು ಯುವಕರ ಮೇಲೆ ತಲವಾರು ದಾಳಿ

ಉಪ್ಪಿನಂಗಡಿ: ಐದು ಜನರ ಗುಂಪೊಂದು ತಲವಾರು ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಬಳಿ ನಡೆದಿದೆ.

ಅಂಗಡಿಯೊಂದರ ಬದಿಯಲ್ಲಿ ಸ್ಥಳೀಯ ನಿವಾಸಿಗಳಾದ ಫಯಾಝ್,ಹಫೀಜ್, ಕುಳಿತುಕೊಂಡಿದ್ದ ವೇಳೆ ಅಲ್ಲಿಗೆ ಬಂದಿದ್ದ 4 ರಿಂದ 5 ಜನರ ತಂಡ ಇವರ ಮೇಲೆ ಏಕಾಏಕಿ ತಲವಾರು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಸದ್ಯ ಗಾಯಗೊಂಡವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.ಬಳಿಕ ನಡೆದ ಬೆಳವಣಿಗೆಯಲ್ಲಿ ಬೈಕ್ ನಲ್ಲಿ ಬಂದ 30 ರಿಂದ 40 ಮಂದಿಯ ತಂಡ ಸಿದ್ದೀಕ್, ಅಯ್ಯೂಬ್,ಝಕರಿಯಾ ಮೇಲೆ ತಲವಾರು ದಾಳಿ ನಡೆಸಿದ್ದಾರೆ.

ಅಂಡೆತಡ್ಕದ ಜಯರಾಮ ಮತ್ತು ಆತನ ತಂಡದಿಂದ ಈ ಕೃತ್ಯ ನಡೆದಿದೆ ಎಂದು ಸ್ಥಳೀಯರು ದೂರಿದ್ದಾರೆ. ಇನ್ನು ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

06/12/2021 11:30 am

Cinque Terre

14.22 K

Cinque Terre

0

ಸಂಬಂಧಿತ ಸುದ್ದಿ