ಮೂಳೂರು: ಮನೆಯಲ್ಲಿ ಕಸಾಯಿಖಾನೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಪೊಲೀಸರು ಮನೆಯ ಬಾಗಿಲು ಮುರಿದು ಮನೆಗೆ ನುಗ್ಗಿ ಮಹಿಳೆಯರ ಮೇಲೆ ಹಲ್ಲೆ ನಡೆಸಿ, ಮಹಿಳೆಯರ ಬಟ್ಟೆ ಹರಿದು ದೌರ್ಜನ್ಯ ನಡೆಸಿದ ಘಟನೆಯನ್ನು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ, ಉಡುಪಿ ಜಿಲ್ಲಾ ಸಮಿತಿಯು ಖಂಡಿಸುತ್ತದೆ.
ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಇಂತಹ ಪೊಲೀಸ್ ದೌರ್ಜನ್ಯಗಳು ನಿರಂತರವಾಗಿ ನಡೆಯುತ್ತಿದ್ದು ಇದರ ಮುಂದುವರಿದ ಭಾಗವಾಗಿ ಇಂದು ಉಡುಪಿಯಲ್ಲಿ ಈ ಘಟನೆ ನಡೆದಿದೆ. ಇಂದಿನ ಘಟನೆಯಲ್ಲಿ ತಪ್ಪಿತಸ್ಥ ಪೊಲೀಸರನ್ನು ಅಮಾನತುಗೊಳಿಸಬೇಕು ಹಾಗೂ ಅವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಅಧ್ಯಕ್ಷರಾಗಿರುವ ನಝೀರ್ ಅಹ್ಮದ್ ರವರು ಪತ್ರಿಕಾ ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.
ಪೊಲೀಸ್ ದೌರ್ಜನ್ಯದಿಂದ ಗಾಯಗೊಂಡವರು ಉಡುಪಿಯ ಅಜ್ಜರ ಕಾಡು ಆಸ್ಪತ್ರೆಯಲ್ಲಿ ದಾಖಲಾಗಿದ್ದು ಅವರನ್ನು S D P I ಜಿಲ್ಲಾ ನಿಯೋಗ ಭೇಟಿ ಮಾಡಿ ಸಾಂತ್ವನ ನೀಡಿತು.
Kshetra Samachara
10/12/2021 06:27 pm