ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಬಸ್ ನಲ್ಲಿ ನೈತಿಕ ಪೊಲೀಸ್ ಗಿರಿ; ನಾಲ್ವರ ಸೆರೆ

ಮಂಗಳೂರು: ಮಂಗಳೂರು ನಗರದಲ್ಲಿ ಇಬ್ಬರು ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ‌.

ಬಂಧಿತರನ್ನು ಪ್ರಕಾಶ್, ರಾಘವೇಂದ್ರ, ರಂಜಿತ್, ಪವನ್ ಎಂದು ಗುರುತಿಸಲಾಗಿದೆ. ಈ ನಾಲ್ವರು ಆರೋಪಿಗಳು ಮಂಗಳೂರು ನಗರ ಹೊರವಲಯದ ವಾಮಂಜೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿ - ವಿದ್ಯಾರ್ಥಿನಿ ಜತೆಯಾಗಿ ಉಡುಪಿಗೆ ತೆರಳುವ ಬಸ್ಸಿನಲ್ಲಿ ಕುಳಿತಿದ್ದುದನ್ನು ಕಂಡು ಬಸ್ಸಿನೊಳಗೆ ನುಗ್ಗಿ ವಿದ್ಯಾರ್ಥಿಗಳನ್ನು ತರಾಟೆಗೆ ತೆಗೆದುಕೊಂಡು ಬಲವಂತವಾಗಿ ಕೆಳಗಿಳಿಸಿ ಮಾನಸಿಕ ಹಿಂಸೆ ನೀಡಿದ್ದರು.

ಅಲ್ಲದೆ, ವಿದ್ಯಾರ್ಥಿಯ ಗುರುತಿನ ಚೀಟಿ ಮತ್ತು ವಿಳಾಸವನ್ನು ಕೇಳಿ ಸಾರ್ವಜನಿಕವಾಗಿ ಬೆದರಿಸಿದ್ದರು.

Edited By : Nagesh Gaonkar
Kshetra Samachara

Kshetra Samachara

11/12/2021 08:18 pm

Cinque Terre

27.21 K

Cinque Terre

40

ಸಂಬಂಧಿತ ಸುದ್ದಿ