ಉಡುಪಿ: ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ಸರಕಾರಿ ಹಾಸ್ಟೆಲ್‌ನ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಹಾಸ್ಟೆಲ್‌ನ ಭದ್ರತಾ ಸಿಬಂದಿಯನ್ನು ಪೋಕ್ಸೋ ಕಾಯ್ದೆಯಡಿ ಉಡುಪಿ ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಹಾಸ್ಟೆಲ್‌ನ ಭದ್ರತಾ ಸಿಬಂದಿ ಜಗನ್ನಾಥ್ (54) ಬಂಧಿತ ಆರೋಪಿ. ಈತ ಹಾಸ್ಟೆಲ್‌ನ 10ನೇ ತರಗತಿಯ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ್ದ ಎಂದು ಮಕ್ಕಳ ರಕ್ಷಣಾ ಘಟಕಕ್ಕೆ ದೂರು ಬಂದಿತ್ತು. ಅದರಂತೆ ಘಟಕದ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದು ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Kshetra Samachara
14/12/2021 11:14 am