ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಕಳೆದ ಎರಡು ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಆರೋಪಿ ವಕೀಲ ಕೆ.ಎಸ್.ಎನ್. ರಾಜೇಶ್ ಭಟ್ ಮಂಗಳೂರು ಕೋರ್ಟ್ ಗೆ ಇಂದು ಶರಣಾದ ಬೆನ್ನಲ್ಲೇ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಆರೋಪಿ ರಾಜೇಶ್ ಭಟ್ 3ನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಇಂದು ಸಂಜೆ ಶರಣಾಗಿದ್ದು, ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಜಾಮೀನು ಅರ್ಜಿಯ ವಿಚಾರಣೆ ನಾಳೆ ನಡೆಯಲಿದೆ. ಈತನ ವಿರುದ್ಧ ಅಕ್ಟೋಬರ್ 18ರಂದು ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿತ್ತು.
Kshetra Samachara
20/12/2021 07:50 pm