ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ್ಕಳದಲ್ಲಿ ಮೆಕ್ಯಾನಿಕ್ ಎಂಜಿನಿಯರ್ ಆತ್ಮಹತ್ಯೆಗೆ ಶರಣು

ಕಾರ್ಕಳ: ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ಆಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೋಳ ಗ್ರಾಮದ ಮಂಜಲ್‌ ನಿವಾಸಿ ಗಣೇಶ್ ಎ.ಎಸ್. (44) ಆತ್ಮಹತ್ಯೆ ಮಾಡಿಕೊಂಡವರು.ಇವರು ಮನೆಯ ಹಾಲ್‌ನ ಪಕ್ಕಾಸಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೆಕ್ಯಾನಿಕ್ ಇಂಜಿನಿಯರ್ ಆಗಿದ್ದ ಇವರು ,ಜಾಗ ಮಾರಾಟ ಸಂಬಂಧ ಮಧ್ಯಸ್ಥಿಕೆ ಕೂಡ ನಡೆಸುತ್ತಿದ್ದರು. ಜಾಗಕ್ಕೆ ಸಂಬಂಧಿಸಿ ದಾರಿಯ ವಿವಾದವೊಂದರಲ್ಲಿ ಸಮಸ್ಯೆಯುಂಟಾಗಿತ್ತು.

ಇದರಿಂದ ಮಾನಸಿಕವಾಗಿ ನೊಂದಿದ್ದ ಗಣೇಶ್ ಮನೆಯಲ್ಲಿ ಯಾರೂ ಇಲ್ಲದ ಅವಧಿಯಲ್ಲಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By :
Kshetra Samachara

Kshetra Samachara

21/12/2021 11:36 am

Cinque Terre

9.41 K

Cinque Terre

0

ಸಂಬಂಧಿತ ಸುದ್ದಿ