ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಕುಂದಾಪುರದಲ್ಲಿ ಹನಿಟ್ರ್ಯಾಪ್ ಪ್ರಕರಣ: ಆರೋಪಿ ಬಂಧನ

ಉಡುಪಿ: ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ನಡೆಸಿ ಹಣಕ್ಕಾಗಿ ಬೆದರಿಕೆ ಹಾಕುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಶಂಕರ ನಾರಾಯಣ ಪೊಲೀಸರು ಬಂಧಿಸಿದ್ದಾರೆ.ರಂಜಿತ್ ಎಸ್. ಹೆಂಗವಳ್ಳಿ (26) ಬಂಧಿತ ಆರೋಪಿ.

ಆರೋಪಿಯು ಹಣಕ್ಕಾಗಿ ಹನಿಟ್ರ್ಯಾಪ್ ನಡೆಸಿ ಬೆದರಿಕೆ ಹಾಕುತ್ತಿದ್ದಾನೆ ಎಂದು ವ್ಯಕ್ತಿಯೊಬ್ಬರು ಶಂಕರನಾರಾಯಣ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರಂತೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಆರೋಪಿಯನ್ನು ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು, ಹೆಚ್ಚಿನ ತನಿಖೆಗಾಗಿ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nagaraj Tulugeri
Kshetra Samachara

Kshetra Samachara

23/12/2021 11:06 am

Cinque Terre

15.96 K

Cinque Terre

2

ಸಂಬಂಧಿತ ಸುದ್ದಿ