ಉಡುಪಿ :ತೀವ್ರ ಸಂಚಲನ ಸೃಷ್ಟಿಸಿದ್ದ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿಗೆ ಹೈಕೋರ್ಟ್‌ನಲ್ಲಿ ಜಾಮೀನು ದೊರೆತಿದೆ.2016 ರಲ್ಲಿ ಉದ್ಯಮಿ ಭಾಸ್ಕರ್ ಶೆಟ್ಟಿ ಅವರನ್ನು ಉಡುಪಿಯ ಇಂದ್ರಾಳಿಯಲ್ಲಿರುವ ಅವರ ಮನೆಯಲ್ಲಿ ಪತ್ನಿ ರಾಜೇಶ್ವರಿ ಶೆಟ್ಟಿ ಹಾಗೂ ಮಗ ನವನೀತ್ ಶೆಟ್ಟಿ ಸೇರಿ ಕೊಲೆ ಮಾಡಿದ್ದರು. ಬಳಿಕ ಮೃತದೇಹವನ್ನು ಅರ್ಚಕ ನಿರಂಜನ್ ಭಟ್ ಜತೆ ಸೇರಿ ಹೋಮಕುಂಡದಲ್ಲಿ ಹಾಕಿ ಸುಡಲಾಗಿತ್ತು.
ಹೋಮಕುಂಡ ಪ್ರಕರಣ ಎಂದೇ ಕುಖ್ಯಾತಿ ಗಳಿಸಿದ್ದ ಈ ಪ್ರಕರಣದಲ್ಲಿ ಉಡುಪಿ ನ್ಯಾಯಾಲಯವು ಕೊಲೆ ಪ್ರಕರಣದ ಆರೋಪಿಗಳಾದ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ ಮತ್ತು ರಾಜೇಶ್ವರಿ ಗೆಳೆಯ, ಅರ್ಚಕ ನಿರಂಜನ್ ಭಟ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.
ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ರಾಜೇಶ್ವರಿ ಶೆಟ್ಟಿ ಹೈಕೋರ್ಟ್ ಮೇಟ್ಟಿಲೇರಿದ್ದರು. ಇದೀಗ ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
Kshetra Samachara
23/12/2021 07:01 pm