ಕೋಟ: ಕೋಟ ತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ಹತ್ತು ಗಂಟೆ ಸುಮಾರಿಗೆ ಮೆಹಂದಿ ಕಾರ್ಯಕ್ರಮ ನಡೆಯುತ್ತಿದ್ದ ಮನೆಗೆ ಪೊಲೀಸರು ನುಗ್ಗಿದ್ದಾರೆ.
ಬಳಿಕ ಕಾರ್ಯಕ್ರಮದಲ್ಲಿ ಸೇರಿದ್ದ ಹೆಣ್ಣು ಮಕ್ಕಳ ಮೇಲೆ ಮದುಮಗನ ಮೇಲೆ ಪೊಲೀಸರು ಲಾಠಿ ಬೀಸಿದ್ದಾರೆ.
ಕೊರಗ ಸಮುದಾಯಕ್ಕೆ ಸೇರಿದವರ ಮನೆ ಇದಾಗಿದ್ದು ಪೊಲೀಸರ ಈ ಕೃತ್ಯ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.ಪೊಲೀಸರ ಲಾಠಿ ಏಟಿನಿಂದಾಗಿ ಮದುಮಗ ಮತ್ತಿತರರಿಗೆ ಗಾಯಗಳಾಗಿವೆ. ಕೊರಗ ಸಮುದಾಯದ ಜನರ ಮೇಲೆ ಲಾಠಿ ಚಾರ್ಜ್ ಮಾಡಿ , ಅವಾಚ್ಯ ಶಬ್ದಗಳಿಂದ ಬೈದ ಕೋಟ ಠಾಣಾಧಿಕಾರಿ ಮತ್ತು ಸಿಬಂದಿಗಳನ್ನು ಕೂಡಲೇ ಅಮಾನತು ಮಾಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಮುಖಂಡರು ಆಗ್ರಹಿಸಿದ್ದಾರೆ.
ಇನ್ನು ಕೂಡಲೆ ಅಮಾನತು ಮಾಡದಿದ್ದರೆ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಕಛೇರಿ ಎದುರು ಧರಣಿ ನಡೆಸುವುದಾಗಿ ದಲಿತ ಮುಖಂಡರು ಎಚ್ಚರಿಕೆ ನೀಡಿದ್ದಾರೆ.ಅಂದಹಾಗೆ ಜಿಲ್ಲೆಯಲ್ಲಿ ಸಾಕಷ್ಟು ಕಾರ್ಯಕ್ರಮಗಳು ನಡೆಯುತ್ತಿದ್ದು ,ಶ್ರೀಮಂತರಿಗೊಂದು ನ್ಯಾಯ ಬಡವರಿಗೆ ಒಂದು ನ್ಯಾಯವೇ ಎಂದು ಜನ ಆಕ್ರೋಶಗೊಂಡಿದ್ದಾರೆ.
Kshetra Samachara
28/12/2021 01:33 pm