ಕೋಟ: ಕೋಟದಲ್ಲಿ ನಡೆದ ಪೋಲಿಸ್ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ತಪ್ಪಿತಸ್ಥ ಪೊಲೀಸರ ವಿಚಾರಣೆ ಮುಗಿಯುವ ತನಕ ಕೋಟ ಠಾಣೆಯಿಂದ ಸ್ಥಳಾಂತರ ಮಾಡಿ ಉಡುಪಿ ಎಸ್ಪಿ ವಿಷ್ಣುವರ್ದನ ಆದೇಶ ನೀಡಿದ್ದಾರೆ.ಕೊರಗ ಜನಾಂಗದ ಮೆಹಂದಿ ಕಾರ್ಯಕ್ರಮದಲ್ಲಿ ಲಾಠಿಚಾರ್ಜ ನಡೆಸಿದ ಆರೋಪ ಎದುರಿಸುತ್ತಿರುವ ಪಿಎಸ್ ಐ ಸಂತೋಷ್ ಮತ್ತು ಐವರು ಸಿಬ್ಬಂದಿಗಳನ್ನು ಠಾಣೆಯಿಂದ ಶಿಫ್ಟ್ ಮಾಡಲಾಗಿದೆ. ಮುಂದಿನ ಆದೇಶದವರೆಗೆ ಪಿಎಸ್ ಐ ಮತ್ತು 5 ಮಂದಿ ಸಿಬ್ಬಂದಿಗಳು ಕೋಟ ಠಾಣೆಯಲ್ಲಿ ಕರ್ತವ್ಯಕ್ಕೆ ಹಾಜರಾಗುವಂತಿಲ್ಲ ಎಂದು ಉಡುಪಿ ಎಸ್ ಪಿ ವಿಷ್ಣುವರ್ಧನ್ ಆದೇಶ ಹೊರಡಿಸಿದ್ದಾರೆ.
ಪ್ರಕರಣ ಸಂಬಂಧ ಉಡುಪಿ ಡಿಎಸ್ ಪಿ ನೇತೃತ್ವದಲ್ಲಿ ತನಿಖೆಗೆ ನಡೆಯಲಿದ್ದು ,ನಾಳೆ ಸಂಜೆಯ ಒಳಗೆ ತನಿಖೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸುದ್ದಿಗೋಷ್ಢಿ ನಡೆಸಿ , ಘಟನೆ ನಿಜವಾಗಿದ್ದಲ್ಲಿ ಖಂಡಿತ ಕ್ರಮ ಕೈಗೊಳ್ಳುತ್ತೇವೆ.ಇಲಾಖೆ ಬಗ್ಗೆ ನಂಬಿಕೆ ಇರಲಿ.ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
Kshetra Samachara
28/12/2021 09:10 pm