ಕೋಟ: ಕೊರಗ ಸಮುದಾಯದ ಮನೆಯಲ್ಲಿ ನಡೆದ ಮೆಹೆಂದಿ ಕಾರ್ಯಕ್ರಮದಲ್ಲಿ ಲಾಠಿಚಾರ್ಜ್ ಆರೋಪ ಕೇಳಿಬಂದಿದೆ. ಈ ಕೂಡಲೇ ಉನ್ನತ ಅಧಿಕಾರಿಗಳಿಂದ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಾಲಿಡಾರಿಟಿ ಯೂತ್'ಮೂಮೆಂಟ್ ಉಡುಪಿ ಜಿಲ್ಲಾ ಸಂಚಾಲಕ ಯಾಸೀನ್ ಕೋಡಿಬೆಂಗ್ರೆ ಆಗ್ರಹಿಸಿದ್ದಾರೆ.
ಕೋಟ ತಟ್ಟುವಿನ ಕೊರಗ ಕಾಲೋನಿಯದ ಚಿಟ್ಟು ಬೆಟ್ಟುವಿನಲ್ಲಿ ಮದುವೆಯ ಮುನ್ನ ದಿನವಾದ ಸೋಮವಾರ ರಾತ್ರಿ ಮೆಹೆಂದಿ ಕಾರ್ಯಕ್ರಮ ನಡೆಯುತ್ತಿರುವಾಗ ಪೊಲೀಸರು ಏಕಾಏಕಿ ನುಗ್ಗಿ ಲಾಠಿಚಾರ್ಜ್ ನಡೆಸಿದ ಆರೋಪ ಇದೆ. ದುರ್ಬಲ ಸಮುದಾಯದ ವಿರುದ್ಧದ ಈ ರೀತಿಯ ವರ್ತನೆಯನ್ನು ಸಾಲಿಡಾರಿಟಿ ಯೂತ್'ಮೂಮೆಂಟ್ ತೀವ್ರವಾಗಿ ಖಂಡಿಸುತ್ತದೆ. ಸಬ್ ಇನ್ಸ್‌ಪೆಕ್ಟರ್ ಸಂತೋಷ್ ಮತ್ತು ಸಿಬ್ಬಂದಿಗಳು ಸೇರಿ ಈ ರೀತಿಯ ವರ್ತನೆ ಮಾಡಿರುವ ಕುರಿತು ಆರೋಪ ಕೇಳಿ ಬಂದಿದೆ. ಅದರೊಂದಿಗೆ ಕೊರಗ ಸಮುದಾಯದ ನಾಯಕ ಗಣೇಶ್ ಅವರಿಗೂ ತೀವ್ರವಾಗಿ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದ್ದು ಈ ಕುರಿತು ಕೂಡಲೇ ಸರಕಾರ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಸಾಲಿಡಾರಿಟಿ ಯೂತ್'ಮೂಮೆಂಟ್ ಆಗ್ರಹಿಸಿದೆ.
Kshetra Samachara
28/12/2021 09:24 pm