ಕೋಟ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರಗರ ಕಾಲೋನಿಯಲ್ಲಿ ರಾತ್ರಿ ನಡೆಯುತ್ತಿದ್ದ ಸಮಾರಂಭವೊಂದಕ್ಕೆ ಏಕಾಏಕಿ ದಾಳಿ ಮಾಡಿದ ಪೊಲೀಸರು, ಮದುಮಗನ ಸಹಿತ ಅಮಾಯಕ ಕೊರಗರ ಮೇಲೆ ಹಲ್ಲೆ ಮಾಡಿದ್ದನ್ನು ಪ್ರಬಲವಾಗಿ ಖಂಡಿಸುತ್ತೇನೆ.
ಸದ್ರಿ ಕುಟುಂಬಗಳು ನನಗೆ ಪರಿಚಯವಿದ್ದು, ಅಲ್ಲಿರುವ 9ಕ್ಕೂ ಹೆಚ್ಚು ಕುಟುಂಬದವರು ಅಮಾಯಕರಾಗಿದ್ದಾರೆ. ಅವರ ಮೇಲೆ ವಿನಾಕಾರಣ ದೌರ್ಜನ್ಯ ಎಸಗಿರುವ ಪೊಲೀಸರ ಮೇಲೆ ತಕ್ಷಣ ಕಠಿಣ ಕ್ರಮ ಜರುಗಿಸಬೇಕೆಂದು ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಪಶ್ಚಿಮ ವಲಯ ಐಜಿಪಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಸೂಚನೆ ನೀಡಿದ್ದೇನೆ.
ಈಗಾಗಲೇ ಸ್ಥಳೀಯ ಶಾಸಕರಾದ ಮಾನ್ಯ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಅಧಿಕಾರಿಗಳ ಮೇಲೆ ಕ್ರಮ ಜರುಗಿಸಲು ಸೂಚಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಪಾರ್ಟಿಯ ರಾಜ್ಯ ಕಾರ್ಯಕಾರಣಿಯಲ್ಲಿ ತಾನು ಭಾಗವಹಿಸಿದ್ದು, ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರ ಜೊತೆ ಮಾತನಾಡಿ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಲು ಮನವಿ ಮಾಡಿದ್ದೇನೆ.
Kshetra Samachara
29/12/2021 08:54 am