ಮುಲ್ಕಿ: ಮುಲ್ಕಿ ನಗರ ಪಂಚಾಯತ್ ಹಾಗೂ ಕಿಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲಾ-ಕಾಲೇಜು ಪರಿಸರದಲ್ಲಿ ತಂಬಾಕು ಮಾರಾಟ ನಿಷೇಧ ಕಾಯ್ದೆ ಅನ್ವಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಡಾ. ಕಿಶೋರ್ ಕುಮಾರ್ ಸೂಚನೆಯಂತೆ,ದ.ಕ. ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ಹಾಗೂ ಮುಲ್ಕಿ ಪೊಲೀಸ್ ಠಾಣೆಯ ಅಧಿಕಾರಿಗಳ ಸಹಕಾರದೊಂದಿಗೆ ಅಕ್ರಮವಾಗಿ ಅಂಗಡಿಗಳಲ್ಲಿ ಮಾರಾಟ ಮಾಡುತ್ತಿದ್ದ ತಂಬಾಕನ್ನು ಪತ್ತೆಹಚ್ಚಿ ಪ್ರಕರಣ ದಾಖಲಿಸಿ ಸುಮಾರು 4100 ರೂಪಾಯಿ ದಂಡ ವಿಧಿಸಿ ಎಚ್ಚರಿಕೆ ನೀಡಲಾಯಿತು.
ಕಾರ್ಯಾಚರಣೆಯಲ್ಲಿ ಡಾ. ಹನುಮಂತರಾಯಪ್ಪ, ಶೃತಿ, ಪ್ರದೀಪ್ ,ವಿದ್ಯಾ, ಪೊಲೀಸ್ ಸಿಬ್ಬಂದಿ ಹನುಮಂತ್ ಇದ್ದರು.
Kshetra Samachara
29/12/2021 03:47 pm