ಮಂಗಳೂರು: ನಗರದ ಶ್ರೀ ಕೊರಗಜ್ಜನ ಕಟ್ಟೆಯಲ್ಲಿ ಕಾಂಡೋಮ್ ಇಟ್ಟು ವ್ಯಕ್ತಿಯೊಬ್ಬ ದುಷ್ಕೃತ್ಯವೆಸಗಿರುವ ಪ್ರಕರಣದ ಕುರಿತು ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ನಿನ್ನೆ ಕೊರಗಜ್ಜನ ಕಟ್ಟೆಯಲ್ಲಿ ಕಾಂಡೋಮ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಈ ಬಗ್ಗೆ ತನಿಖೆ ನಡೆಸಿದ ಸಂದರ್ಭ ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ವ್ಯಕ್ತಿಯೊಬ್ಬ ಕೊರಗಜ್ಜನ ಗುಡಿಗೆ ಬಂದು ಕಾಂಡೋಮ್ ಇಟ್ಟು ತೆರಳುವ ದೃಶ್ಯ ಸಿಸಿ ಟಿವಿಯಲ್ಲಿ ದಾಖಲಾಗಿದೆ.
ಈ ಘಟನೆ ಡಿಸೆಂಬರ್ 27ರ ರಾತ್ರಿ 11.40ಕ್ಕೆ ನಡೆದಿದೆ. ಸಿಸಿ ಟಿವಿಯಲ್ಲಿ ದೊರೆತ ಸುಳಿವಿನ ಆಧಾರದಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹುಬ್ಬಳ್ಳಿ ಮೂಲದ ಪ್ರಸ್ತುತ ಮಂಗಳೂರಿನ ಕೋಟೆಕಾರು, ಕೊಂಡಾಣ ನಿವಾಸಿ ದೇವದಾಸ್ ದೇಸಾಯಿ(62) ಆರೋಪಿ. ಇದೀಗ ಆತ ತಾನು ಇಲ್ಲಿ ಮಾತ್ರವಲ್ಲ ಮಂಗಳಾದೇವಿ ದೇವಸ್ಥಾನ, ಉಳ್ಳಾಲ ದರ್ಗಾ ಬಳಿಯ ಮಸೀದಿಯ ಕಾಣಿಕೆ ಡಬ್ಬಿ, ಉರ್ವ ಮಾರಿಗುಡಿ ದೇವಸ್ಥಾನದ ಕಾಣಿಕೆ ಡಬ್ಬಿ, ಕುತ್ತಾರು ಕೊರಗಜ್ಜನ ಕಟ್ಟೆ ಮತ್ತಿತರೆಡೆ ಸೇರಿ ಸುಮಾರು 16-18 ದೇವಸ್ಥಾನ, ದೈವಸ್ಥಾನಗಳಲ್ಲಿ ಇಂತಹದೇ ಕೃತ್ಯ ಎಸಗಿರುವುದಾಗಿ ಬಾಯಿ ಬಿಟ್ಟಿದ್ದಾನೆ. ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಆರೋಪಿಯ ತನಿಖೆ ನಡೆಸಲಾಗುತ್ತಿದೆ.
PublicNext
29/12/2021 03:53 pm