ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ಸಾಲ ಮರುಪಾವತಿಗಾಗಿ ಕಿರುಕುಳ: ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ಯುವಕ

ಕುಂದಾಪುರ: ಮೊಬೈಲ್ app ನಲ್ಲಿ‌ ಮಾಡಿಕೊಂಡ ಸಾಲ ತೀರಿಸಲಾಗದೆ ಡೆತ್ ನೋಟ್ ಬರೆದಿಟ್ಟು ಎಮ್ಎನ್ಸಿ ಕಂಪೆನಿಯ ಉದ್ಯೋಗಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಮ್ಮಾಡಿಯ ಹರೆಗೋಡುವಿನಲ್ಲಿ ನಡೆದಿದೆ.

ಹೆಮ್ಮಾಡಿಯ ಹರೆಗೋಡು ಕೊಳಹಿತ್ಲು ನಿವಾಸಿ ವಿಘ್ನೇಶ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ.

ನಿನ್ನೆ ರಾತ್ರಿ ಮನೆಯಲ್ಲಿ ಊಟ ಮುಗಿಸಿ ಮಲಗಿದ್ದ ವಿಘ್ನೇಶ್ ನಸುಕಿನ ಜಾವ ಐದು ಗಂಟೆಯ ಸುಮಾರಿಗೆ ಮನೆ ಎದುರಿನ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಘ್ನೇಶ್ ತಾಯಿ ಬೆಳಿಗ್ಗೆ ಎದ್ದು ನೋಡುವಾಗ ಮನೆಯ ಬಾಗಿಲು ತೆರೆದಿತ್ತು. ಅನುಮಾನಗೊಂಡು ಹೊರಗಡೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ವಿಘ್ನೇಶ್ ಬೆಂಗಳೂರಿನ ಎಮ್ ಎನ್ ಸಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಉದ್ಯಮಕ್ಕೆ ಬಂಡವಾಳ ಹಾಕುವ ಉದ್ದೇಶದಿಂದ ಮೊಬೈಲ್ ಯಾಪ್‌ ಮೂಲಕ ಸಾಲ ಪಡೆದುಕೊಂಡಿದ್ದರು ಎನ್ನಲಾಗಿದೆ. ಲಾಕ್ ಡೌನ್ ಕಾರಣದಿಂದಾಗಿ ಸಾಲ ತೀರಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಮೊಬೈಲ್ ಯಾಪ್ ಮೂಲಕ ಸಾಲ ಕೊಟ್ಟವರು ಕಿರುಕುಳ ನೀಡಿದ್ದರಿಂದ ಅವರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nagaraj Tulugeri
Kshetra Samachara

Kshetra Samachara

30/12/2021 08:54 pm

Cinque Terre

9.51 K

Cinque Terre

0

ಸಂಬಂಧಿತ ಸುದ್ದಿ