ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ : ಕೊರಗರ ಮೇಲೆ ಪೊಲೀಸ್ ದೌರ್ಜನ್ಯ:ವಿವರಣೆ ಕೇಳಿದ ರಾಷ್ಟ್ರೀಯ ಮಹಿಳಾ ಆಯೋಗ!

ಉಡುಪಿ: ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಾಲ್ಕು ದಿನಗಳ ಹಿಂದೆ ನಡೆದಿದ್ದ ಕೊರಗರ ಮೇಲಿನ ಪೊಲೀಸ್ ದೌರ್ಜನ್ಯ ಇದೀಗ ರಾಷ್ಟ್ರೀಯ ಮಹಿಳಾ ಆಯೋಗದ ಗಮನ ಸೆಳೆದಿದ್ದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವಿವರಣೆ ಕೇಳಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶಾಮಲಾ ಕುಂದರ್, ಕೊರಗರ ಮೇಲಿನ ಪೊಲೀಸ್ ದೌರ್ಜನ್ಯ ಪೊಲೀಸರ ಮೇಲಿನ ವಿಶ್ವಾಸವನ್ನೇ ಕಳೆದುಕೊಳ್ಳುವಂತೆ ಮಾಡುತ್ತದೆ.

ಜನಸಾಮಾನ್ಯರನ್ನು ರಕ್ಷಿಸಬೇಕಾದ ಪೊಲೀಸರೇ ಈ ರೀತಿ ವರ್ತಿಸಿರುವುದು ಸಮಾಜಕ್ಕೆ ತಪ್ಪು ಸಂದೇಶ ನೀಡಿದಂತೆ. ಈ ಸಂಬಂಧ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆದು ವಿವರಣೆ ಕೇಳಿದ್ದೇವೆ. ಮುಂದಿನ ದಿನಗಳಲ್ಲಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಕುಂದರ್ ಹೇಳಿದ್ದಾರೆ.

Edited By : Shivu K
Kshetra Samachara

Kshetra Samachara

01/01/2022 10:29 am

Cinque Terre

9.87 K

Cinque Terre

1

ಸಂಬಂಧಿತ ಸುದ್ದಿ