ಕುಂದಾಪುರ: ಕೋಟೇಶ್ವರ ಸಮೀಪದ ಯುವ ಮೆರಿಡಿಯನ್ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯುತ್ತಿದ್ದ ಚಿನ್ನ ಮತ್ತು ವಜ್ರಾಭರಣಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆಯಿಂದ ಚಿನ್ನಾಭರಣ ಕಳವು ಮಾಡಿದ್ದ ಇಬ್ಬರು ಅಂತಾರಾಜ್ಯ ಕಳ್ಳರನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.
ಮಹಾರಾಷ್ಟ್ರದ ಪುಣೆಯ ಧನರಾಜ್ ವಿಜಯ ಪರ್ ಮಾರ್ (42) ಮತ್ತು ಅಜಯ್ ಸಿಂಗ್ ಕಿಶೋರ್ ಸಾಲುಂಕ್ (23) ಬಂಧಿತ ಆರೋಪಿಗಳು. ಇಬ್ಬರು ಅಂತಾ ರಾಜ್ಯ ಕಳ್ಳರನ್ನು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಲಾಯಿತು. ಬಂಧಿತರಿಂದ 1 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಆರೋಪಿಗಳು ನ. 29 ರಂದು ಗ್ರಾಹಕರ ಸೋಗಿನಲ್ಲಿ ಬಂದು 2 ಚಿನ್ನದ ಬಳೆಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುವುದು ಸಿಸಿಟಿವಿ ಫೂಟೇಜ್ ಪರಿಶೀಲನೆ ವೇಳೆ ತಿಳಿದು ಬಂದಿತ್ತು. ಕಳವಾದ 43 ಗ್ರಾಂ ಚಿನ್ನದ ಬಳೆಗಳ ಮೌಲ್ಯ ರೂ 2.86 ಲಕ್ಷ ಎಂದು ಅಂದಾಜಿಸಲಾಗಿದೆ. ಈ ಕುರಿತು ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Kshetra Samachara
04/01/2022 09:08 am