ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: "ಸುಳ್ಳು ಪ್ರಕರಣ ದಾಖಲಿಸಿ ದೌರ್ಜನ್ಯ ನಡೆಸಿದ ಎಸ್ಸೈಯನ್ನು ವಜಾಗೊಳಿಸಿ"

ಗಂಗೊಳ್ಳಿ: ದನ ಕಳ್ಳತನದ ಸುಳ್ಳು ಆರೋಪ ಹೊರಿಸಿ ಗಂಗೊಳ್ಳಿಯ ಮುಹಮ್ಮದ್ ಇಬ್ರಾಹಿಂ ವಿರುದ್ಧ ಪ್ರಕರಣ ದಾಖಲಿಸಿರುವ ಮತ್ತು ಅವರನ್ನು ನಕಲಿ ಎನ್‌ಕೌಂಟರ್ ಮಾಡಿ ಕೊಲೆ ನಡೆಸಲು ಪ್ರಯತ್ನಿಸಿದ ಗಂಗೊಳ್ಳಿ ಪೊಲೀಸ್ ಠಾಣೆಯ ಎಸ್ಸೈ ನಂಜ ನಾಯ್ಕರನ್ನು ಕರ್ತವ್ಯದಿಂದ ವಜಾಗೊಳಿಸಬೇಕು ಎಂದು ಎಸ್‌ಡಿಪಿಐ ಉಡುಪಿ ಜಿಲ್ಲಾಧ್ಯಕ್ಷ ನಝೀರ್ ಅಹ್ಮದ್ ಒತ್ತಾಯಿಸಿದ್ದಾರೆ.

ಎಸ್‌ಡಿಪಿಐ ಜಿಲ್ಲಾ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ನಂಜನಾಯ್ಕ ಪೂರ್ವಗ್ರಹಪೀಡಿತರಾಗಿ ಸಮಾಜದ ಒಂದು ಸಮುದಾಯವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವಂತಹ ಕೃತ್ಯವನ್ನು ನಿರಂತರವಾಗಿ ಮಾಡುತ್ತಿದ್ದಾರೆ. ಇಂತಹ ಮನಸ್ಥಿತಿಯ ಪೊಲೀಸ್ ಅಧಿಕಾರಿಗಳು ಕರ್ತವ್ಯದಲ್ಲಿ ರುವುದು ಸಮಾಜಕ್ಕೆ ಕಂಟಕ ಎಂದು ಟೀಕಿಸಿದರು.ಅಮಾಯಕರ ಮೇಲೆ ದೌರ್ಜನ್ಯ ಎಸಗುತ್ತಿರುವ ಎಸ್ಸೈ ನಂಜ ನಾಯ್ಕ ವಿರುದ್ಧ ಸೂಕ್ತ ತನಿಖೆ ಯನ್ನು ನಡೆಸಿ ಕೂಡಲೇ ಕೆಲಸದಿಂದ ವಜಾ ಗೊಳಿಸಬೇಕು ಮತ್ತು ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಎಸ್‌ಡಿಪಿಐ ಉಪಾಧ್ಯಕ್ಷ ಶಾಹೀದ್ ಅಲಿ, ಪ್ರಧಾನ ಕಾರ್ಯದರ್ಶಿ ಖಲೀಲ್ ಅಹ್ಮದ್, ಕಾಪು ಕ್ಷೇತ್ರ ಅಧ್ಯಕ್ಷ ಹನೀಫ್ ಮೂಳೂರು, ಸಂತ್ರಸ್ತ ಮುಹಮ್ಮದ್ ಇಬ್ರಾಹಿಂ ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

04/01/2022 01:30 pm

Cinque Terre

9.87 K

Cinque Terre

2

ಸಂಬಂಧಿತ ಸುದ್ದಿ