ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಕ್ಕಿಂಜೆ ಲಾಡ್ಜ್ ನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಆತ್ಮಹತ್ಯೆ

ಬೆಳ್ತಂಗಡಿ; ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆಯಲ್ಲಿ ನಡೆದಿದೆ.

ಹಾಸನದ ಬೇಲೂರು ನಿವಾಸಿ ರಿಯಲ್ ಎಸ್ಟೇಟ್ ಉದ್ಯಮಿ ಕುಮಾರ್ ಎಮ್ ಎಸ್ (36), ಆತ್ಮಹತ್ಯೆ ಮಾಡಿಕೊಂಡವರು. ಇವರು ತನ್ನ ಮನೆಯಿಂದ ಸ್ಕೂಟಿಯಲ್ಲಿ ಧರ್ಮಸ್ಥಳದ ಕಡೆಗೆ ಹೋಗಿದ್ದರು. ಆದರೆ ಮರಳಿ ಮನೆಗೆ ಹೋಗದ ಕಾರಣ ಪತ್ನಿ ಮತ್ತು ಆತನ ಸ್ನೇಹಿತರು ಧರ್ಮಸ್ಥಳದ ಕಡೆ ಹುಡುಕಾಡುತ್ತ ಬಂದಿದ್ದಾರೆ.

ಇದೇ ವೇಳೆ ಬೆಳ್ತಂಗಡಿ ತಾಲೂಕು ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಸಾಲಿಯಾನ್ ವಸತಿ ಗೃಹದ ಮುಂದೆ ಕುಮಾರ್ ಅವರ ಸ್ಕೂಟಿಯನ್ನು ನೋಡಿ ವಸತಿ ಗೃಹದ ಮೇಲ್ವಿಚಾರಕರನ್ನು ವಿಚಾರಿಸಿದಾಗ ಕೊಠಡಿಯನ್ನು ಪಡೆದುಕೊಂಡ ಬಗ್ಗೆ ಮಾಹಿತಿಯನ್ನು ಸಿಕ್ಕಿತು. ಕೂಡಲೇ ವಸತಿ ಗೃಹದ ಮೇಲ್ವಿಚಾರಕರೊಂದಿಗೆ ಹೋಗಿ ನೋಡಿದಾಗ ನೈಲಾನ್ ಹಗ್ಗ ಕಟ್ಟಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮ ಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ‌.

ಮೃತರು ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದರು. ಮದುವೆಯಾಗಿ ಒಂದು ಗಂಡು ಹಾಗೂ ಹೆಣ್ಣು ಮಕ್ಕಳೊಂದಿಗೆ ಸಂಸಾರ ನಡೆಸುತ್ತಿದ್ದರು. ವ್ಯವಹಾರಕ್ಕಾಗಿ ಖಾಸಗಿ ವ್ಯಕ್ತಿಗಳಿಂದ ಕೈ ಸಾಲವನ್ನು ಪಡೆದಿದ್ದು ಕೈ ಸಾಲವನ್ನು ತೀರಿಸಲಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

Edited By : Nirmala Aralikatti
Kshetra Samachara

Kshetra Samachara

12/01/2022 11:23 pm

Cinque Terre

9.29 K

Cinque Terre

0

ಸಂಬಂಧಿತ ಸುದ್ದಿ