ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು: "ಎಎಸ್ಸೈ ಮೇಲೆ ಹಲ್ಲೆ ನಡೆದರೂ ಆರೋಪಿಗಳ ಬಂಧಿಸದ ಪೊಲೀಸರು!"

ಪುತ್ತೂರು: ಪುತ್ತೂರಿನಲ್ಲಿ ನಡೆಯುವ ಎಲ್ಲ ಅಪರಾಧ ಕೃತ್ಯಗಳಿಗೆ ಪೊಲೀಸರು ಕ್ರಮ ಕೈಗೊಳ್ಳಲು ಪ್ರತಿ ಬಾರಿಯೂ ಪ್ರತಿಭಟನೆ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ ಸ್ಥಾಪಕಾಧ್ಯಕ್ಷ ಸೇಸಪ್ಪ ಬೆದ್ರಕಾಡು ಆರೋಪಿಸಿದ್ದಾರೆ.

ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸೇಸಪ್ಪ, ಪುತ್ತೂರಿನ ಸಂಪ್ಯ ಗ್ರಾಮಾಂತರ ಠಾಣೆಯಲ್ಲಿ ಎರಡು ದಲಿತ ಪ್ರಕರಣ, ಪುತ್ತೂರು ನಗರ ಠಾಣೆ ವ್ಯಾಪ್ತಿಯಲ್ಲಿ ದಲಿತ ಪೊಲೀಸ್ ಎಎಸ್ಸೈ ಮೇಲೆ ನಡೆದ ಹಲ್ಲೆ ಪ್ರಕರಣ ಹೀಗೆ ಎಲ್ಲ ಪ್ರಕರಣದಲ್ಲೂ ಪೊಲೀಸರು ಕ್ರಮ ಕೈಗೊಳ್ಳಲು ಮೀನಮೇಷ ಎಣಿಸುತ್ತಿದ್ದಾರೆ ಎಂದರು.

ಓರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸುವಲ್ಲಿಯೂ ವಿಳಂಬ ನೀತಿ ಅನುಸರಿಸುತ್ತಿರುವುದು ಸರಿಯಲ್ಲ ಎಂದ ಅವರು, ಪೊಲೀಸ್ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ತಕ್ಷಣವೇ ಬಂಧಿಸದೇ ಇದ್ದಲ್ಲಿ ಮತ್ತೆ ಪ್ರತಿಭಟನೆ ಮಾಡುವುದು ಅನಿವಾರ್ಯ ಎಂದು ಎಚ್ಚರಿಸಿದರು.

Edited By : Manjunath H D
Kshetra Samachara

Kshetra Samachara

15/01/2022 01:29 pm

Cinque Terre

17.27 K

Cinque Terre

2

ಸಂಬಂಧಿತ ಸುದ್ದಿ