ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೆಬ್ರಿಯಲ್ಲಿ ಎಂಟನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು!

ಹೆಬ್ರಿ: ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ದಿನೇ ದಿನೆ ಹೆಚ್ಚುತ್ತಿದ್ದು ,ನಿನ್ನೆ ಕೂಡ ಓರ್ವ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾದ ವಿಷಯ ಬೆಳಕಿಗೆ ಬಂದಿದೆ. 8ನೇ ತರಗತಿಯ ವಿದ್ಯಾರ್ಥಿ ಮನೆಯ ಸ್ನಾನ ಗೃಹದಲ್ಲಿ ನೇಣಿಗೆ ಶರಣಾಗಿದ್ದಾನೆ.

ಕೆರೆಬೆಟ್ಟು ಗ್ರಾಮದ ಮಾವಿನಕಟ್ಟೆಮನೆ ನಿವಾಸಿ ಅನ್ವಿತ್ (14) ಆತ್ಮಹತ್ಯೆ ಮಾಡಿಕೊಂಡಾತ. ಈತ ಮಮತಾ ಶೆಟ್ಟಿ ಹಾಗೂ ಸತೀಶ್ ದಂಪತಿ ಪುತ್ರ. ಸರಿಯಾಗಿ ಕಲಿಯುವಂತೆ ತಾಯಿ ಬುದ್ಧಿಮಾತು ಹೇಳುತ್ತಿದ್ದರು.

ಇದೇ ವಿಚಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By :
Kshetra Samachara

Kshetra Samachara

17/01/2022 03:24 pm

Cinque Terre

9.85 K

Cinque Terre

1

ಸಂಬಂಧಿತ ಸುದ್ದಿ