ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ನೇತ್ರಾವತಿ ಸೇತುವೆಯಲ್ಲಿ ಬೈಕ್ ನಿಲ್ಲಿಸಿ, ನದಿಗೆ ಹಾರಿ ಸ್ಥಳೀಯ ಆತ್ಮಹತ್ಯೆ

ಬಂಟ್ವಾಳ: ಬೈಕ್, ಚಪ್ಪಲಿ, ಮೊಬೈಲ್ ಅನ್ನು ಬಂಟ್ವಾಳ ನೇತ್ರಾವತಿ ಸೇತುವೆಯಲ್ಲಿ ನಿಲ್ಲಿಸಿ, ನದಿಗೆ ಹಾರಿ ಸ್ಥಳೀಯ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ನಡೆದಿದೆ.

ಸ್ಥಳೀಯ ಕಾರಾಜೆ ನಿವಾಸಿ ಜಲೀಲ್ ( 55) ಮೃತಪಟ್ಟ ವ್ಯಕ್ತಿ. ರಾತ್ರಿ ಸುಮಾರು 11 ಗಂಟೆಯ ವೇಳೆಗೆ ನೇತ್ರಾವತಿ ಸೇತುವೆ ಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ 11 ಗಂಟೆಯ ವೇಳೆಗೆ ನೇತ್ರಾವತಿ ಸೇತುವೆಯಲ್ಲಿ ಬೈಕ್ ಚಪ್ಪಲಿ ಹಾಗೂ ಮೊಬೈಲ್ ಇಟ್ಟು ಯಾರು ಇಲ್ಲದ ಬಗ್ಗೆ ಸಂಶಯಗೊಂಡ ಸ್ಥಳೀಯ ಈಜುಗಾರರು ನದಿಯಲ್ಲಿ ಹುಡುಕಲು ಆರಂಭಿಸಿದರು.

ಸ್ಥಳದಲ್ಲಿ ದ್ದ ಮೊಬೈಲ್ ಬಗ್ಗೆ ಮಾಹಿತಿ ಪಡೆದು ವಿಚಾರಿಸಿ ದಾಗ ಕಾರಾಜೆ ನಿವಾಸಿ ಜಲೀಲ್ ಎಂದು ಗುರುತು ಪತ್ತೆಯಾಗಿತ್ತು. ಆದರೆ ತಡ ರಾತ್ರಿವರೆಗೂ ಹುಡುಕಿದಾಗ ವ್ಯಕ್ತಿಯ ಪತ್ತೆಯಾಗಿರಲಿಲ್ಲ. ಬುಧವಾರ ಮುಂಜಾನೆಯಿಂದ ಸ್ಥಳೀಯ ಈಜುಗಾರ ಸತ್ತಾರ್ ಹಾಗೂ ಮೊಹಮ್ಮದ್ ಅವರು ನದಿಯಲ್ಲಿ ಈಜಾಡಿ ಹುಡುಕಿದಾಗ ನದಿಯಲ್ಲಿ ಶವ ಪತ್ತೆಯಾಗಿದೆ.

Edited By : Nagaraj Tulugeri
Kshetra Samachara

Kshetra Samachara

19/01/2022 09:24 am

Cinque Terre

7.1 K

Cinque Terre

0

ಸಂಬಂಧಿತ ಸುದ್ದಿ