ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಬ್ರಹ್ಮಣ್ಯ: ಬಿಸಿಲೆ ಘಾಟ್ ನಲ್ಲಿ ಅಪರಿಚಿತ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ

ಸುಳ್ಯ: ಬಿಸಿಲೆ ಘಾಟ್‌ನಲ್ಲಿ ಅಪರಿಚಿತ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಆದರೆ ವಿಷಯ ತಿಳಿದ ಯುವ ತೇಜಸ್ಸು ಟ್ರಸ್ಟ್ ಸದಸ್ಯರು ವ್ಯಕ್ತಿಯನ್ನ ಆಸ್ಪತ್ರೆಗೂ ಕರೆದುಕೊಂಡು ಹೋಗಿದ್ದಾರೆ. ಆದರೆ ದಾರಿಯಲ್ಲಿಯೇ ಆ ವ್ಯಕ್ತಿ ಮೃತಪಟ್ಟಿದ್ದಾರೆ.

ಬಿಸಿಲೆ ಘಾಟ್ ನ ಚೌಡೇಶ್ವರಿ ಅಮ್ಮನವರ ಗುಡಿಯಿಂದ ಸುಮಾರು 100 ಮೀಟರ್ ಇಳಿಜಾರಿನ ಪ್ರದೇಶದಲ್ಲಿ, ಸುಮಾರು 60ರಿಂದ 70 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.ಸ್ಥಳೀಯರ ಗಮನಕ್ಕೆ ಬಂದು ಕೂಡಲೇ ಸುಬ್ರಮಣ್ಯದ ಯುವ ತೇಜಸ್ಸು ಟ್ರಸ್ಟ್ ಗೆ ಮಾಹಿತಿ ತಿಳಿಸಿದ್ದಾರೆ.

ಆ ಕೂಡಲೇ ಸದಸ್ಯರು ಈ ವ್ಯಕ್ತಿಯನ್ನ ಸುಬ್ರಮಣ್ಯ ಸರ್ಕಾರಿ ಆಸ್ಪತ್ರೆಗೂ ಕರೆದೊಯ್ದರು.ಅಲ್ಲಿಂದ ಸುಳ್ಳದ ಸರ್ಕಾರಿ ಆಸ್ಪತ್ರೆಗೂ ಕರೆದಯೋದ್ರು. ಆದರೆ ದಾರಿಯಲ್ಲಿಯೇ ವ್ಯಕ್ತಿ ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಘಟನೆಯ ಬಗ್ಗೆ ಮಾಹಿತಿ ಪಡೆದ ಸುಬ್ರಮಣ್ಯ ಪೊಲೀಸರು ಮತ್ತು ಎಸಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

Edited By :
Kshetra Samachara

Kshetra Samachara

19/01/2022 04:29 pm

Cinque Terre

6.89 K

Cinque Terre

0

ಸಂಬಂಧಿತ ಸುದ್ದಿ