ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಮಂಗಳೂರು: ಪ್ರಕರಣವೊಂದರಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿಯೋರ್ವನು ಕಳೆದ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದು, ಇದೀಗ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಕಾರ್ಕಳದ ಬಜಗೋಳಿಯ ಡಿಡಿಂಬಿಲ ಗುಡ್ಡೆ ನಿವಾಸಿ ಝಕಾರಿಯಾ ಬಂಧನಕ್ಕೊಳಗಾದ ಆರೋಪಿ.

2000ದ ಸಂದರ್ಭ ಆರೋಪಿ ಝಕಾರಿಯಾನ ವಿರುದ್ಧ ನಗರದ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಆ ಬಳಿಕ ಆತ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ.ಇದೀಗ ಆರೋಪಿಯ ಇರುವಿಕೆಯ ಬಗ್ಗೆ ಖಚಿತ ಮಾಹಿತಿ ಪಡೆದ ಬಂದರು ಪೊಲೀಸರು ದಾಳಿ ನಡೆಸಿ ಆತನನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದಾರೆ.

Edited By :
Kshetra Samachara

Kshetra Samachara

19/01/2022 05:07 pm

Cinque Terre

18.09 K

Cinque Terre

2

ಸಂಬಂಧಿತ ಸುದ್ದಿ