ಮುಲ್ಕಿ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಲೂರು ಪದವು ಎಂಬಲ್ಲಿ ಮದ್ಯದ ಜೊತೆ ವಿಷ ಬೆರೆಸಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ಸುಧಾಕರ ಬಂಗೇರ (58) ಎಂದು ಗುರುತಿಸಲಾಗಿದೆ.
ಮೃತ ಸುಧಾಕರ ವಿಪರೀತ ಕುಡಿತದ ಚಟ ಹೊಂದಿದ್ದು, ಇದೇ ಮದ್ಯದ ಜೊತೆ ವಿಷ ಸೇವಿಸಿ ತೀವ್ರ ಅಸ್ವಸ್ಥಗೊಂಡು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಮುಲ್ಕಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Kshetra Samachara
30/01/2022 10:46 pm