ಉಡುಪಿ: ಜಿಲ್ಲೆಯಲ್ಲಿ ಆತ್ಮಹತ್ಯೆ ಸರಣಿ ಮುಂದುವರೆದಿದ್ದು, ಇವತ್ತು ಯುವ ಉದ್ಯಮಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ನಗರದ ಡ್ರೈ ಫ್ರಟ್ ಮಾರಾಟ ಮಳಿಗೆಯ ಮಾಲಕರ ಪುತ್ರ ಇಂದು ಬೆಳಿಗ್ಗೆ ಅಂಬಲಪಾಡಿಯ ತಮ್ಮ ವಸತಿ ಸಮುಚ್ಚಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾರ್ತಿಕ್ ಪೈ (37) ಆತ್ಮಹತ್ಯೆ ಮಾಡಿಕೊಂಡವರು. ಇವರು ಮದುವೆಯಾಗಿ ಐದು ವರ್ಷವಾದರೂ ಮಕ್ಕಳಾಗಿರಲಿಲ್ಲ. ಇದೇ ಕಾರಣದಿಂದ ಮನನೊಂದು ಇಂದು ಬೆಳಿಗ್ಗೆ ತಮ್ಮ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
02/02/2022 02:52 pm